ಚನ್ನಗಿರಿ: 2025ನೇ ಸಾಲಿನಲ್ಲಿ ದುಬೈನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಥ್ರೋಬಾಲ್ ಟೂರ್ನಿಯಲ್ಲಿ ಭಾಗವಹಿಸಲು ಚನ್ನಗಿರಿ ತಾಲ್ಲೂಕಿನ ಇಬ್ಬರು ಮಹಿಳಾ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಫ್ರೆಂಡ್ಸ್ ಸ್ಪೋರ್ಟ್ಸ್ ಅಕಾಡೆಮಿ ಸಂಸ್ಥೆಯಿಂದ ದುಬೈನಲ್ಲಿ 2025 ಫೆ.15ರಿಂದ 20ರ ವರೆಗೆ ನಡೆಯಲಿರುವ ಥ್ರೋಬಾಲ್ ಟೂರ್ನಿಗೆ ರಾಷ್ಟ್ರಮಟ್ಟದ ತಂಡವನ್ನು ಸಿದ್ಧಗೊಳಿಸಿದ್ದು, ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದ ಎಚ್.ಕೆ. ರೂಪಾ ಹಾಗೂ ಕಗತೂರು ಗ್ರಾಮದ ಆರ್.ಸುಜಾತಾ ಆಯ್ಕೆಯಾಗಿದ್ದಾರೆ.
ಈ ಇಬ್ಬರು ಕ್ರೀಡಾಪಟುಗಳು 2022 ನೇ ಸಾಲಿನಲ್ಲಿ ಮಲೇಷ್ಯಾದಲ್ಲಿ ನಡೆದ ಅಂತರರಾಷ್ಟ್ರೀಯ ಥ್ರೋಬಾಲ್ ಕ್ರೀಡಾಕೂಟದಲ್ಲಿ ರಾಷ್ಟ್ರತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕ ಪಡೆದುಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.