ದಾವಣಗೆರೆ: ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರಿಗೆ ಕಪ್ಪು ಶಿಲೀಂಧ್ರ ಇರುವುದು ಸೋಮವಾರ ದೃಢಪಟ್ಟಿದೆ. ಅಲ್ಲಿಗೆ ಒಟ್ಟು ಕಪ್ಪು ಶಿಲೀಂಧ್ರ ಪ್ರಕರಣಗಳ ಸಂಖ್ಯೆ 129ಕ್ಕೆ ಏರಿದೆ. ಇಬ್ಬರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಜಿಲ್ಲಾ ಆಸ್ಪತ್ರೆಯಲ್ಲಿ ಈವರೆಗೆ 88 ಪ್ರಕರಣಗಳು ಪತ್ತೆಯಾಗಿದ್ದು, 67 ಮಂದಿ ಗುಣಮುಖರಾಗಿದ್ದಾರೆ. ಎಸ್‌ಎಸ್ ಹೈಟೆಕ್ ಆಸ್ಪತ್ರೆಯಲ್ಲಿ 38 ಕಪ್ಪು ಶಿಲೀಂಧ್ರ ಪ್ರಕರಣಗಳು ಪತ್ತೆಯಾಗಿದ್ದು, 31 ಮಂದಿ ಗುಣಮುಖರಾಗಿದ್ದಾರೆ. ಬಾಪೂಜಿ ಆಸ್ಪತ್ರೆಯಲ್ಲಿ ಎರಡು ಮತ್ತು ಕಾಲೇಜ್ ಆಫ್ ಡೆಂಟಲ್ ಸೈನ್ಸ್‌ನಲ್ಲಿ ಒಂದು ಪ್ರಕರಣ ಪತ್ತೆಯಾಗಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.