ADVERTISEMENT

ಜಗಳೂರು | ಪ್ರತ್ಯೇಕ ಅಪಘಾತ; ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 5:45 IST
Last Updated 25 ಫೆಬ್ರುವರಿ 2026, 5:45 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ಗೆಟ್ಟಿ ಚಿತ್ರ

ಜಗಳೂರು: ತಾಲ್ಲೂಕಿನಲ್ಲಿ ಮಂಗಳವಾರ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ADVERTISEMENT

ಕಾನಾಹೊಸಹಳ್ಳಿಯಿಂದ ದೊಣೆಹಳ್ಳಿ ಕಡೆಗೆ ತೆರಳುತ್ತಿದ್ದ ಬೈಕೊಂದು ಮೂಡಲ ಮಾಚಿಕೆರೆ ಕ್ರಾಸ್‌ನಲ್ಲಿ ತಿರುವು ಪಡೆಯುತ್ತಿದ್ದಾಗ ಹೊಸಪೇಟೆ ಕಡೆಯಿಂದ ಚಿತ್ರದುರ್ಗದತ್ತ ಹೊರಟಿದ್ದ ಲಾರಿ ಡಿಕ್ಕಿಯಾಗಿದೆ. ನಿಬಗೂರು ಗ್ರಾಮದ ಪಾಂಡಪ್ಪ (60) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. 

ಜಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ನಲ್ಲಿ ಕಾಮಗೇತನಹಳ್ಳಿಯಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ದಂಪತಿಗೆ ದೇವಿಕೆರೆ ಸಮೀಪ ಆಟೊ ಡಿಕ್ಕಿಯಾಗಿದೆ. ಈ ವೇಳೆ ಗಾಯಗೊಂಡಿದ್ದ ದಾವಣಗೆರೆ ತಾಲ್ಲೂಕು ಮಳಲಕೆರೆ ಗ್ರಾಮದ ನಿವಾಸಿ ಕುಮಾರಪ್ಪ (57) ಮೃತಪಟ್ಟಿದ್ದಾರೆ.

ಕುಮಾರಪ್ಪ ಹಾಗೂ ಅವರ ಪತ್ನಿಯನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕುಮಾರಪ್ಪ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಳಿಚೋಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.