ADVERTISEMENT

ತಲೆಕೆಳಗಾದ ಧ್ವಜ: ಆರೋಪ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 3:38 IST
Last Updated 16 ಆಗಸ್ಟ್ 2021, 3:38 IST
ದಾವಣಗೆರೆಯ ಧೂಡಾ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ತಲೆಕೆಳಕಾಗಿ ಹಾರಿಸಿದರು.
ದಾವಣಗೆರೆಯ ಧೂಡಾ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ತಲೆಕೆಳಕಾಗಿ ಹಾರಿಸಿದರು.   

ದಾವಣಗೆರೆ:ದಾವಣಗೆರೆ– ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭಾನುವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಅವರು ರಾಷ್ಟ್ರಧ್ವಜವನ್ನು ತಲೆಕೆಳಕಾಗಿ ಹಾರಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ ಇಂಗಳೇಶ್ವರ ಆರೋಪಿಸಿದ್ದಾರೆ.

ಧೂಡಾ ಆಯುಕ್ತ ಬಿ.ಟಿ.ಕುಮಾರಸ್ವಾಮಿ, ಎಇಇ ಶ್ರೀಕರ್ ಅವರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಇವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT