ADVERTISEMENT

ದಾವಣಗೆರೆ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ನಾಮಫಲಕ ಅನಾವರಣ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 4:01 IST
Last Updated 14 ಜುಲೈ 2021, 4:01 IST
ದಾವಣಗೆರೆಯ ಪಿ.ಬಿ. ರಸ್ತೆಯಲ್ಲಿರುವ ಮೇಲ್ಸೇತುವೆಗೆ ಸಂಗೋಳ್ಳಿ ರಾಯಣ್ಣನ ನಾಮಫಲಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಉದ್ಘಾಟನೆ ಮಾಡಿದರು
ದಾವಣಗೆರೆಯ ಪಿ.ಬಿ. ರಸ್ತೆಯಲ್ಲಿರುವ ಮೇಲ್ಸೇತುವೆಗೆ ಸಂಗೋಳ್ಳಿ ರಾಯಣ್ಣನ ನಾಮಫಲಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಉದ್ಘಾಟನೆ ಮಾಡಿದರು   

ದಾವಣಗೆರೆ: ವೀರ ಸೇನಾನಿ ಆಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹೆಸರನ್ನು ಮೇಲ್ಸೇತುವೆಗೆ ಇಟ್ಟಿರುವುದು ಒಳ್ಳೆಯ ಕೆಲಸ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೇಳಿದರು.

ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಿ.ಬಿ. ರಸ್ತೆಯಿಂದ ಎಸ್‌ಪಿ ಕಚೇರಿ ಕಡೆ ಹೋಗುವ ಮೇಲ್ಸೇತುವೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೇಲ್ಸೆತುವೆ ನಾಮ ಫಲಕವನ್ನು ಮಂಗಳವಾರ ಅನಾವರಣಗೊಳಿಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

ನಾಮಫಲಕದ ಕೆಳಗೆ ದೇವರಾಜ ಅರಸು ಪ್ರತಿಮೆ ಇರುವುದರಿಂದ ಗೊಂದಲ ಉಂಟಾಗುವುದಿಲ್ವ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಯಾವ ಗೊಂದಲವೂ ಉಂಟಾಗುವುದಿಲ್ಲ. ಜನರಿಗೆ ಸಂಗೊಳ್ಳಿ ರಾಯಣ್ಣ ಅಂದ್ರೆ ಯಾರು? ದೇವರಾಜ ಅರಸು ಅಂದರೆ ಯಾರು? ಎಂಬುದು ಗೊತ್ತಿದೆ’ ಎಂದು ಸಮರ್ಥಿಸಿಕೊಂಡರು.

ADVERTISEMENT

ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಮೇಯರ್‌ ಎಸ್.ಟಿ. ವೀರೇಶ್, ಧೂಡಾ ಆಯುಕ್ತ ಕುಮಾರಸ್ವಾಮಿ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌, ಪಾಲಿಕೆ ಸದಸ್ಯರು, ಧೂಡಾ ಸದಸ್ಯರು, ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.