ADVERTISEMENT

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ಚನ್ನಮ್ಮ ಹೆಸರಿಡಿ: ವಚನಾನಂದ ಸ್ವಾಮೀಜಿ

ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 3:22 IST
Last Updated 26 ಏಪ್ರಿಲ್ 2022, 3:22 IST
ವಚನಾನಂದ ಸ್ವಾಮೀಜಿ
ವಚನಾನಂದ ಸ್ವಾಮೀಜಿ   

ಹರಿಹರ: ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಕೆಳದಿ ರಾಣಿ ಚನ್ನಮ್ಮ ಅವರ ಹೆಸರು ಘೋಷಣೆ ಮಾಡಬೇಕು ಎಂದು ಇಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಅಂತಿಮಗೊಳಿಸಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಅವರ ಹೆಸರು ಘೋಷಣೆ ಮಾಡದಿದ್ದರೆ, ಇತಿಹಾಸದಲ್ಲಿ ಶೌರ್ಯಕ್ಕೆ ಹೆಸರಾದ ಕೆಳದಿ ರಾಣಿ ಚನ್ನಮ್ಮ ಅವರ ಹೆಸರು ಇಡಬೇಕು’ ಎಂದು ಒತ್ತಾಯಿಸಿದರು.

‘ಪಂಚಮಸಾಲಿ ಸಮಾಜದವರಿಗೆ 2 ‘ಎ’ ಮೀಸಲಾತಿ ಸಂಬಂಧ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಿದ್ದೇನೆ’ ಎಂದ ಅವರು, ‘ನಾಡಿನ ದೊಡ್ಡ ಮಠಗಳಂತೆಯೇ ಸಣ್ಣ ಮಠಗಳೂ ಸಮಾಜಮುಖಿ ಸೇವೆ ಸಲ್ಲಿಸುತ್ತಿವೆ. ಅಂತಹ 15 ಮಠಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.