ADVERTISEMENT

ದಾವಣಗೆರೆ: ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2025, 4:53 IST
Last Updated 8 ಆಗಸ್ಟ್ 2025, 4:53 IST
ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ದಾವಣಗೆರೆಯ ಮಾರುಕಟ್ಟೆಯಲ್ಲಿ ತಳಿರು –ತೋರಣ ಖರೀದಿಯಲ್ಲಿ ತೊಡಗಿದ್ದ ಗ್ರಾಹಕರು
ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ದಾವಣಗೆರೆಯ ಮಾರುಕಟ್ಟೆಯಲ್ಲಿ ತಳಿರು –ತೋರಣ ಖರೀದಿಯಲ್ಲಿ ತೊಡಗಿದ್ದ ಗ್ರಾಹಕರು   

ದಾವಣಗೆರೆ: ಶ್ರಾವಣಮಾಸದ ಶುಕ್ರವಾರ ಮಾಡುವ ವರಮಹಾಲಕ್ಷ್ಮಿ ಹಬ್ಬಕ್ಕೆ ಭರದ ಸಿದ್ಧತೆಗಳು ನಡೆದವು. ಹಬ್ಬದ ಅಂಗವಾಗಿ ಮಾರುಕಟ್ಟೆಯಲ್ಲಿ ಗುರುವಾರ ಖರೀದಿಯ ಭರಾಟೆ ಜೋರಾಗಿತ್ತು.

ವರಮಹಾಲಕ್ಷ್ಮಿ ಹಬ್ಬವನ್ನು ಸಡಗರ–ಸಂಭ್ರಮದಿಂದ ಆಚರಿಸಲಾಗುತ್ತದೆ. ಮನೆಗಳಲ್ಲಿ ಲಕ್ಷ್ಮಿ ಮೂರ್ತಿಯನ್ನು ಕೂರಿಸಿ ಪೂಜಿಸುವ ವಾಡಿಕೆ ಇದೆ. ಮನೆ ಅಂಗಳವನ್ನು ಶುಚಿಗೊಳಿಸಿ ರಂಗೋಲಿ ಬಿಡಿಸಿ ತಳಿರು ತೋರಣ ಕಟ್ಟಲಾಗುತ್ತದೆ.

ಹಬ್ಬದ ಅಂಗವಾಗಿ ಮಾರುಕಟ್ಟೆಯಲ್ಲಿ ತಳಿರು–ತೋರಣ ಹೆಚ್ಚಾಗಿ ಕಂಡುಬಂದವು. ನಗರದ ಪ್ರಮುಖ ವೃತ್ತಗಳಲ್ಲಿ ಕೂಡ ಬಾಳೆ ಕಂದು, ಮಾವಿನ ತೋರಣ ಮಾರಾಟ ಮಾಡಲಾಯಿತು.

ADVERTISEMENT

ಹಬ್ಬದ ಸಿದ್ಧತೆಯಲ್ಲಿ ತೊಡಗಿದವರು ಗುರುವಾರ ಮಾರುಕಟ್ಟೆಗೆ ಭೇಟಿ ನೀಡಿ ಹೂ–ಹಣ್ಣು ಖರೀದಿಯಲ್ಲಿ ತೊಡಗಿದ್ದರು. ಕಮಲ, ಗುಲಾಬಿ, ಸೇವಂತಿಗೆ ಹೂವುಗಳಿಗೆ ಬೇಡಿಕೆ ಇತ್ತು. ಹಬ್ಬದ ಅಂಗವಾಗಿ ಹೂ–ಹಣ್ಣುಗಳ ಬೆಲೆ ಗಗನಮುಖಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.