ADVERTISEMENT

ವಿವಿಧ ಬೇಡಿಕೆ ಈಡೇರಿಕೆಗೆ ಗ್ರಾ,ಪಂ. ನೌಕರರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 1:44 IST
Last Updated 23 ಸೆಪ್ಟೆಂಬರ್ 2020, 1:44 IST
ಗ್ರಾಮ ಪಂಚಾಯಿತಿ ನೌಕರರ ಸಂಘವು ಸಿಐಟಿಯು ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.
ಗ್ರಾಮ ಪಂಚಾಯಿತಿ ನೌಕರರ ಸಂಘವು ಸಿಐಟಿಯು ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.   

ದಾವಣಗೆರೆ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘವು ಸಿಐಟಿಯು ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.

ಕನಿಷ್ಠ ವೇತನ ಜಾರಿ ಮಾಡಬೇಕು. ನಿವೃತ್ತರಿಗೆ 15 ತಿಂಗಳ ಗ್ರಾಚ್ಯುವಿಟಿ ನೀಡಬೇಕು. ಬಾಕಿ ಉಳಿದಿರುವ ಕಸ ಗುಡಿಸುವವರು, ಪಂಪ್‌ ಆಪರೇಟರ್‌ಗಳು, ಇತರ ಸಿಬ್ಬಂದಿಯನ್ನು ಇಎಫ್‌ಎಂಎಸ್‌ಗೆ ಸೇರ್ಪಡೆ ಮಾಡಬೇಕು. ಪಂಪ್‌ ಆಪರೇಟರ್‌ಗಳಿಗೆ ಕರವಸೂಲಿಗಾರರ ಹುದ್ದೆಗೆ ಬಡ್ತಿ ನೀಡಬೇಕು. ಬಿಲ್‌ ಕಲೆಕ್ಟರ್‌ಗಳಿಗೆ ಬಡ್ತಿ ನೀಡಬೇಕು. ಜೇಷ್ಠತಾ ಪಟ್ಟಿ ಅಂತಿಮಗೊಳಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಪಂಪ್‌ ಆಪರೇಟರ್‌ಗಳಿಗೆ ಅರ್ಧ ಸಂಬಳ ನೀಡುವ ನೌಕರ ವಿರೋಧಿ ಕ್ರಮ ಕೈಬಿಡಬೇಕು. ಎಲ್ಲರಿಗೂ ಪಿಂಚಣಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಗ್ರಾಮ ಪಂಚಾಯಿತಿ ನೌಕರರ ಸಂಘದ ಸಂಯೋಜಿತ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಎಂ. ಉಮೇಶ್ ಕೈದಾಳ್‌, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಾಚಾರ್‌ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.