ADVERTISEMENT

ನ್ಯಾಮತಿ: ಕಲ್ಲು ಗಣಿಗಾರಿಕೆ ನಿಲ್ಲಿಸಲು ಗ್ರಾಮಸ್ಥರ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2025, 16:00 IST
Last Updated 21 ಫೆಬ್ರುವರಿ 2025, 16:00 IST
ನ್ಯಾಮತಿ ತಾಲ್ಲೂಕಿನ ಆರುಂಡಿ ಗ್ರಾಮಸ್ಥರು ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹಿಸಿ ಮಂಗಳವಾರ ಪ್ರತಿಭಟನೆ ನಡೆಸಿದರು
ನ್ಯಾಮತಿ ತಾಲ್ಲೂಕಿನ ಆರುಂಡಿ ಗ್ರಾಮಸ್ಥರು ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹಿಸಿ ಮಂಗಳವಾರ ಪ್ರತಿಭಟನೆ ನಡೆಸಿದರು   

ಆರುಂಡಿ (ನ್ಯಾಮತಿ): ನ್ಯಾಮತಿ ತಾಲ್ಲೂಕಿನ ಆರುಂಡಿ ಗ್ರಾಮದ ಜಮೀನುಗಳಲ್ಲಿ ನಡೆಸುತ್ತಿರುವ ಕಲ್ಲು ಗಣಿಗಾರಿಕೆ ಮತ್ತು ಕ್ರಷರ್‌ಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತ್ತು ಯುವ ಸಂಘಟನೆ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಕಲ್ಲು ಗಣಿಗಾರಿಕೆ ಮತ್ತು ಕ್ರಷರ್‌ಗಳಿಂದ ಗ್ರಾಮಸ್ಥರ ನೆಮ್ಮದಿ ಹಾಳಾಗಿದೆ. ರಸ್ತೆಗಳು ಮತ್ತು ಜಮೀನುಗಳಲ್ಲಿ ಮಣ್ಣಿನ ಸವೆತ ಉಂಟಾಗಿದೆ. ಸಿಡಿಮದ್ದು ಸ್ಫೋಟದಿಂದ ಕೆಲವು ಮನೆಗಳು ಬಿರುಕು ಬಿಟ್ಟಿವೆ. ಅಂತರ್ಜಲ ಬತ್ತಿ ಹೋಗಿದೆ. ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದ ಯುವಕರು ಕ್ರಷರ್‌ ಹಾಗೂ ಜೆಸಿಬಿ ಯಂತ್ರಗಳನ್ನು ತಡೆದು ನಿಲ್ಲಿಸಿದರು. ಗಣಿಗಾರಿಕೆ ಅನುಮತಿ, ಸರ್ಕಾರದ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡುವಂತೆ ಆಗ್ರಹಿಸಿದರು. 

ADVERTISEMENT

ಗ್ರಾಮಸ್ಥರ ಅಹವಾಲನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಕಳುಹಿಸಿಕೊಡುವುದಾಗಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಭರವಸೆ ನೀಡಿದರು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದ ಅವರು, ಅಲ್ಲಿಯವರೆಗೂ ಗಣಿಗಾರಿಕೆ ಸ್ಥಗಿತಗೊಳಿಸಲಾಗುವುದು ಎಂದರು.

ಪೊಲೀಸ್ ಇನ್‌ಸ್ಪೆಕ್ಟರ್ ಎನ್.ಎಸ್.ರವಿ, ಬೆಳಗುತ್ತಿ ಕಂದಾಯ ನಿರೀಕ್ಷಕ ಎಂ.ಪಿ. ವೃಷಭೇಂದ್ರಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.