ADVERTISEMENT

ಸಾಸ್ವೆಹಳ್ಳಿ: ಲಿಂಗಾಪುರ ಗ್ರಾ.ಪಂ. ಕಚೇರಿಗೆ ಬೀಗ ಹಾಕಿದ ಸ್ಥಳಿಯರು

​ಪ್ರಜಾವಾಣಿ ವಾರ್ತೆ
Published 25 ಜೂನ್ 2025, 15:25 IST
Last Updated 25 ಜೂನ್ 2025, 15:25 IST
<div class="paragraphs"><p>ಸಾಸ್ವೆಹಳ್ಳಿ ಸಮೀಪದ ಲಿಂಗಾಪುರ ಗ್ರಾಮ ಪಂಚಾಯಿತಿಗೆ ಬೀಗ ಹಾಕಿದ್ದ ಗ್ರಾಮಸ್ಥರೊಂದಿಗೆ ಚರ್ಚಿಸುತ್ತಿರುವ ಪೊಲೀಸ್ ಸಿಬ್ಬಂದಿ ಮತ್ತು ಪಂಚಾಯಿತಿ ಅಧಿಕಾರಿಗಳು.</p></div>

ಸಾಸ್ವೆಹಳ್ಳಿ ಸಮೀಪದ ಲಿಂಗಾಪುರ ಗ್ರಾಮ ಪಂಚಾಯಿತಿಗೆ ಬೀಗ ಹಾಕಿದ್ದ ಗ್ರಾಮಸ್ಥರೊಂದಿಗೆ ಚರ್ಚಿಸುತ್ತಿರುವ ಪೊಲೀಸ್ ಸಿಬ್ಬಂದಿ ಮತ್ತು ಪಂಚಾಯಿತಿ ಅಧಿಕಾರಿಗಳು.

   

ಸಾಸ್ವೆಹಳ್ಳಿ: ಗ್ರಾಮದಲ್ಲಿ ಒತ್ತುವರಿ ಮಾಡಿಕೊಂಡಿರುವ ಜಾಗಗಳನ್ನು ತೆರವುಗೊಳಿಸದಿರುವುದರಿಂದ ಬೇಸತ್ತ ಲಿಂಗಾಪುರ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಮಂಗಳವಾರ ಬೆಳಿಗ್ಗೆ ಬೀಗ ಜಡಿದು, ಸಿಬ್ಬಂದಿ ಹಾಗೂ ಪಿಡಿಒ ಹೊರಗೆ ನಿಲ್ಲುವಂತೆ ಮಾಡಿದರು. 

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದು ಮೇಲಾಧಿಕಾರಿಗಳ ಅನುಮತಿ ಮೇರೆಗೆ ಬೀಗ ಒಡೆದು ಸಿಬ್ಬಂದಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟರು.

ADVERTISEMENT

ಗ್ರಾಮದಲ್ಲಿ ಒತ್ತುವರಿ ಮಾಡಿಕೊಂಡಿರುವ ಜಾಗಗಳನ್ನು ತೆರವುಗೊಳಿಸುವಂತೆ ಪಿಡಿಒಗೆ ಗ್ರಾಮಸ್ಥರು ಹಲವು ಬಾರಿ ಲಿಖಿತವಾಗಿ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಬೇಸತ್ತ ಗ್ರಾಮದ ಕೆಲವರು ಕಚೇರಿಗೆ ಬೀಗ ಜಡಿದಿದ್ದಾರೆ.

ಗ್ರಾಮ ಪಂಚಾಯಿತಿ ಪಿಡಿಒ ರೂಪಾ ಆರ್.ಎಲ್ ಪ್ರತಿಕ್ರಿಯಿಸಿ, ‘ಸೋಮವಾರ ಗ್ರಾಮದ ಕೆಲವರು ಪಂಚಾಯಿತಿ ಜಾಗದ ಒತ್ತುವರಿ ಬಗ್ಗೆ ಕ್ರಮ ಕೈಗೊಳ್ಳುವಂತೆ ಅರ್ಜಿ ನೀಡಿದ್ದರು. ಆ ದಿನವೇ ಒತ್ತುವರಿದಾರರಿಗೆ ನೋಟಿಸ್ ನೀಡಲಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.