
ತ್ಯಾವಣಿಗೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯುಂಟಾಗಿದ್ದು, ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ
ತ್ಯಾವಣಿಗೆ: ಗ್ರಾಮದಲ್ಲಿ ಬೇಸಿಗೆ ಆರಂಭಕ್ಕೂ ಮೊದಲೆ ನೀರಿಗೆ ಹಾಹಾಕಾರ ಉಂಟಾಗಿದ್ದು, ಗ್ರಾಮಸ್ಥರಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.
ಕೊಳವೆಬಾವಿಗಳಲ್ಲಿ ನೀರು ಕಡಿಮೆಯಾದ ಕಾರಣ ನೀರಿನ ಸಮಸ್ಯೆಯುಂಟಾಗಿದೆ. ಪ್ರತಿ ವರ್ಷ ಬೇಸಿಗೆಯಲ್ಲಿ ಈ ಸಮಸ್ಯೆಯುಂಟಾಗುತ್ತಿದ್ದು, ಗ್ರಾ.ಪಂ. ಆಡಳಿತ ಇದಕ್ಕೆ ಪರಿಹಾರ ಕ್ರಮ ಕೈಗೊಂಡಿಲ್ಲ. ಈಗ ನಾಲ್ಕೈದು ದಿಗಳಿಗೊಮ್ಮೆ ನೀರು ಬಿಡುತ್ತಿದ್ದು, ನೀರಿನ ಸಮಸ್ಯೆ ಹೆಚ್ಚಾಗಿದೆ ಎಂದು ಗ್ರಾಮಸ್ಥರು ದೂರಿದರು.
ನೀರಿನ ಸಮಸ್ಯೆಗೆ ಸ್ಥಳೀಯ ಆಡಳಿತ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ಸಮಸ್ಯೆಯುಂಟಾಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಗ್ರಾಮದಲ್ಲಿ 8 ರಿಂದ 10 ಕೊಳವೆಬಾವಿಗಳಿದ್ದು, 4 ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಎಂದು ಪಿಡಿಒ ಶರಣಪ್ಪ ಮಲವನಶೆಟ್ಟಿ ತಿಳಿಸಿದರು.
ಗ್ರಾಮಸ್ಥರಿಗೆ ನೀರಿನ ಸಮಸ್ಯೆಯಾಗದಂತೆ ನಾಲ್ಕೈದು ದಿನಗಳಿಂದ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಸೂಳೆಕೆರೆಯಿಂದ ನೀರು ತರಲು ಅಧಿಕಾರಿಗಳಿಗೆ ಮನವಿ ಮಾಡಿದ್ದು, ಮೋಟರ್ ಸುಟ್ಟಿರುವ ಕಾರಣ ನೀರು ತರಿಸುವುದು ತಡವಾಗಿದೆ ಎಂದು ಪ್ರಜಾವಾಣಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.