ಹೊನ್ನಾಳಿ: ತುಂಗಾ ಮತ್ತು ಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರಬಿಟ್ಟ ಪರಿಣಾಮವಾಗಿ ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪಟ್ಟಣದ ಎರಡು ಬಡಾವಣೆಗಳಿಗೆ ನೀರು ನುಗ್ಗಿದೆ.
ಪಟ್ಟಣದ ರಾಘವೇಂದ್ರಸ್ವಾಮಿ ಮಠ ಸಮೀಪದ ವಿಶ್ವೇಶ್ವರ ಶಾಲೆ ಆವರಣಕ್ಕೆ ನೀರು ನುಗ್ಗಿದೆ. ಬಾಲರಾಜ್ ಘಾಟ್‌ನ 20 ಮನೆ ಹಾಗೂ ಬಂಬೂಬಜಾರ್‌ನ 6 ಮನೆಗಳು ಜಲಾವೃತಗೊಂಡಿವೆ.
ಮುನ್ನೆಚ್ಚರಿಕೆ ಕ್ರಮವಾಗಿ 20ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. 90 ಜನರಿಗೆ ಅಂಬೇಡ್ಕರ್ ಭವನದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಮುಳುಗಡೆಯಾದ ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.
ತುಂಗಭದ್ರಾ ನದಿಯಲ್ಲಿ ಸುಮಾರು 1.4 ಲಕ್ಷ ಕ್ಯುಸೆಕ್ ನೀರು ಹರಿಯುತ್ತಿದೆ. ಮಧ್ಯಾಹ್ನದ ಹೊತ್ತಿಗೆ ನದಿ ನೀರಿನ ಮಟ್ಟ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.