ADVERTISEMENT

ಶ್ರೀಮಂತರ ಅಟ್ಟಹಾಸ; ಸಮಾನತೆಗೆ ಧಕ್ಕೆ: ಶಾಸಕ ಬಿ.ಪಿ.ಹರೀಶ್

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 5:29 IST
Last Updated 27 ಜನವರಿ 2026, 5:29 IST
ಹರಿಹರದ ಗಾಂಧಿ ಮೈದಾನದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳನ್ನು ಸನ್ಮಾನಿಸಲಾಯಿತು
ಹರಿಹರದ ಗಾಂಧಿ ಮೈದಾನದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳನ್ನು ಸನ್ಮಾನಿಸಲಾಯಿತು   

ಹರಿಹರ: ಸಂವಿಧಾನ ಸಮಾನತೆಯನ್ನು ಸಾರಿದ್ದರೂ ಕೆಲ ಶ್ರೀಮಂತರು ಅಟ್ಟಹಾಸ ಮೆರೆಯುತ್ತಿದ್ದು, ಅದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.

ನಗರದ ಗಾಂಧಿ ಮೈದಾನದಲ್ಲಿ ಸೋಮವಾರ ತಾಲ್ಲೂಕು ಆಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂಬೇಡ್ಕರ್‌ರವರು ಹಕ್ಕುಗಳ ಜೊತೆಗೆ ಜವಾಬ್ದಾರಿಯನ್ನೂ ನಿಭಾಯಿಸಲು ಒತ್ತು ನೀಡಿದ್ದಾರೆ ಎಂದು ತಿಳಿಸಿದರು.

ADVERTISEMENT

ಇದೇ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಸುರೇಶ್ ಹನಗವಾಡಿಯವರ ಸಾಧನೆಯನ್ನು ಸ್ಮರಿಸಿದರು.

ನಮ್ಮ ಸಾಮಾಜಿಕ ಹಾಗೂ ಆರ್ಥಿಕ ಬದುಕಿನಲ್ಲಿ ಸಮಾನತೆ ಇದ್ದರೆ ಮಾತ್ರ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಧ್ವಜಾರೋಹಣ ನೆರೆವೇರಿಸಿದ ತಹಶೀಲ್ದಾರ್ ಜಿ. ಸಂತೋಷ್ ಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸೈನಿಕರಿಗೆ ಹಾಗೂ ಪೌರ ಕಾರ್ಮಿಕರನ್ನು ಸತ್ಕರಿಸಲಾಯಿತು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಪ್ರಥಮ ಮೂರು ಸ್ಥಾನ ಪಡೆದ ವಿಧ್ಯಾರ್ಥಿಗಳಿಗೆ ತಲಾ ₹ 50 ಸಾವಿರ ನಗದು ನೀಡಿ ಗೌರವಿಸಲಾಯಿತು.

ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ತಾಲ್ಲೂಕು ಪಂಚಾಯಿತಿ ಇಒ ಬಸವರಾಜ್, ಪೌರಾಯುಕ್ತ ವಿನಯ ಕುಮಾರ್, ಬಿಇಒ ಡಿ.ದುರುಗಪ್ಪ, ಇನ್‌ಸ್ಪೆಕ್ಟರ್ ಸುರೇಶ ಸಗರಿ, ಆರ್.ಎಫ್. ದೇಸಾಯಿ ಹಾಗೂ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.