
ಪ್ರಜಾವಾಣಿ ವಾರ್ತೆ
ವಂದೇ ಭಾರತ್ ರೈಲಿನಲ್ಲಿ ಪ್ರವಾಸ ಕೈಗೊಂಡ ವಿದ್ಯಾರ್ಥಿಗಳು
ಕಡರನಾಯ್ಕನಹಳ್ಳಿ: ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಂದೇ ಭಾರತ್ ರೈಲಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ.
‘ಪೋಷಕರೇ ಆಸಕ್ತಿ ವಹಿಸಿ ಮೈಸೂರು, ಶ್ರೀರಂಗಪಟ್ಟಣ, ಬೆಂಗಳೂರು, ಆದಿಚುಂಚನಗಿರಿ ಪ್ರವಾಸದ ವ್ಯವಸ್ಥೆ ಮಾಡಿದ್ದಾರೆ’ ಎಂದು ಮುಖ್ಯೋಪಾಧ್ಯಾಯ ಸಿ.ಪಿ. ಕುಬೇರಪ್ಪ ತಿಳಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಶಿವರಾಜ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ. ಮಂಜುನಾಥ್ ಶುಭ ಹಾರೈಸಿದರು. ಶಿಕ್ಷಕ ಸಂಗಮೇಶ, ಶಿಕ್ಷಕಿಯರಾದ ಜ್ಯೋತಿಲಕ್ಷ್ಮಿ, ನಂದಿಸುವರ್ಣ, ಸುನಂದಾ, ರೂಪಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.