ADVERTISEMENT

ತಂಬಾಕು ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಕೈ ಜೋಡಿಸಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2019, 12:21 IST
Last Updated 19 ಅಕ್ಟೋಬರ್ 2019, 12:21 IST

ಶಿವಮೊಗ್ಗ: ಆರೋಗ್ಯ ಮತ್ತು ಪೊಲೀಸ್ ಇಲಾಖೆಯು ತಂಬಾಕು ಉತ್ಪನ್ನಗಳ ನಿಯಂತ್ರಣದಲ್ಲಿ ಕಾರ್ಯ ಪ್ರವೃತ್ತವಾಗಿದ್ದು,ಉಳಿದ ಇಲಾಖೆಗಳು ಸಹ ಕೈಜೋಡಿಸಬೇಕುಎಂದು 2ನೇ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಕುಡುವಕ್ಕಲಿಗರ್ ಮಹದೇವಪ್ಪ ಗಂಗಪ್ಪ ಹೇಳಿದರು.

ಐಎಂಎ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ತಂಬಾಕು ನಿಯಂತ್ರಣ ಕಾಯ್ದೆಯ ಕುರಿತು ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್ ನಾಗಲೀಕರ್ ಮಾತನಾಡಿ,‘ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ’ ಎಂದರು.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜ್, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಸರಸ್ವತಿ, ಹೇಮಂತ್‍ ರಾಜ, ಡಾ. ಅಚ್ಯುತ್, ಎಸ್.ಟಿ. ಶಿವಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.