ದಾವಣಗೆರೆ: ‘ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆ ಹೆಸರು ಬದಲಾವಣೆ ಕಾಂಗ್ರೆಸ್ ನಡೆಸುತ್ತಿರುವ ಹೋರಾಟ ಜನರ ದಿಕ್ಕು ತಪ್ಪಿಸುವ ತಂತ್ರ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು.
‘ವಿಕಸಿತ ಭಾರತ ಗಾಂಧೀಜಿಯ ಕನಸಾಗಿದೆ. ಅವರ ಆದರ್ಶಗಳು ಹಲವು ಯೋಜನೆಗಳಲ್ಲಿ ಜೀವಂತವಾಗಿವೆ. ಕಾಂಗ್ರೆಸ್‌ನ ಹೋರಾಟ ಚುನಾವಣಾ ತಂತ್ರಗಾರಿಕೆ ಎಂಬುದು ಜನರಿಗೂ ಗೊತ್ತಾಗಿದೆ’ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
‘ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಕಿತ್ತಾಟ ನಡೆಯುತ್ತಿರುವುದರಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ವಿಪಕ್ಷವಾಗಿ ಬಿಜೆಪಿ ಸಮರ್ಥವಾಗಿ ಕೆಲಸ ಮಾಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ’ ಎಂದರು.
‘ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿನ ಒತ್ತುವರಿ ತೆರವು ವಿಚಾರದಲ್ಲಿ ಸರ್ಕಾರ ಕಾನೂನು ಪ್ರಕಾರ ಮುಂದುವರಿಯುವುದು ಒಳ್ಳೆಯದು. ಅಕ್ರಮವೋ ಅಧಿಕೃತವೋ ಎಂಬುದನ್ನು ನ್ಯಾಯಾಲಯ, ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.