ADVERTISEMENT

ಪ್ರೇಮಿ ಮೇಲೆ ಸೀಮೆ ಎಣ್ಣೆ ಎರಚಿ ಬೆಂಕಿ ಹಚ್ಚಿದ ಯುವತಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2020, 11:27 IST
Last Updated 20 ಜನವರಿ 2020, 11:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಚ್ಚಂಗಿದುರ್ಗ: ಸಮೀಪದ ವಡ್ಡಿನಹಳ್ಳಿ ಗ್ರಾಮದಲ್ಲಿ ಪ್ರೇಮಿಯ ಮೇಲೆ ಪ್ರಿಯತಮೆ ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಿದ್ದು, ಸುಟ್ಟಗಾಯಗಳಿಂದ ನರಳುತ್ತಿದ್ದಾರೆ.

ಗ್ರಾಮದ ಲಕ್ಷ್ಮೀ ಮತ್ತು ಪರಸಪ್ಪ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವತಿಗೆ ಈಚೆಗೆ ಬೇರೊಬ್ಬ ಹುಡುಗನ ಜೊತೆ ನಿಶ್ಚಿತಾರ್ಥ ನೆರವೇರಿದೆ. ಈ ಕುರಿತು ಭಾನುವಾರ ಪರಸಪ್ಪ ಲಕ್ಷ್ಮೀ ಅವರ ಮನೆಗೆ ಹೋಗಿದ್ದಾಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಕೋಪಗೊಂಡ ಯುವತಿ ಬಕೆಟ್‌ನಲ್ಲಿ ಸೀಮೆಎಣ್ಣೆ ತುಂಬಿಕೊಂಡು ಪರಸಪ್ಪ ಅವರ ಮೇಲೆ ಎರಚಿ, ಬೆಂಕಿ ಹಚ್ಚಿದ್ದಾಳೆ. ಬೆಂಕಿಯ ಉರಿ ತಾಳಲಾರದೆ ಪರಸಪ್ಪ ಪಕ್ಕದ ಹುಲ್ಲಿನ ಬಣವೆಗೆ ಮೈ ಉಜ್ಜಿದ್ದು, ಬಣವೆ ಕೂಡ ಬೆಂಕಿಗೆ ಆಹುತಿಯಾಗಿದೆ. ವಿಷಯ ತಿಳಿದ ಗ್ರಾಮಸ್ಥರು ಯುವಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಕುರಿತು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.