ADVERTISEMENT

ಅಕ್ರಮ ಮದ್ಯದ ಬಾಕ್ಸ್‌ಗಳ ವಶ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2013, 8:40 IST
Last Updated 19 ಏಪ್ರಿಲ್ 2013, 8:40 IST

ಧಾರವಾಡ: ಕಲಘಟಗಿ ತಾಲ್ಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸುಮಾರು 14,640 ಸಾವಿರ ರೂಪಾಯಿ ಮೌಲ್ಯದ ಮದ್ಯವನ್ನು ಅಬಕಾರಿ ಜಾರಿ ಮತ್ತು ಲಾಟರಿ ನಿಷೇದ ದಳದ ಸಿಬ್ಬಂದಿ ಗುರುವಾರ ವಶಪಡಿಸಿಕೊಂಡಿದ್ದಾರೆ.

ದೇವಿಕೊಪ್ಪ ಗ್ರಾಮದ ಚಾಯಾ ಅವ್ವನ್ನವರ ಹಾಗೂ ಮಹಾದೇವ ದೇವಜಿ ಎಂಬುವವರೇ ಅಕ್ರಮವಾಗಿ ಮದ್ಯವವನ್ನು ಮಾರಾಟ ಮಾಡುತ್ತಿದ್ದರು. ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಗಸ್ತು ತಿರುಗುತ್ತಿದ್ದ ಅಬಕಾರಿ ಪೊಲೀಸರು ಖಚಿತ ಮಾಹಿತಿ ತಿಳಿದ ಕೂಡಲೇ ಪೊಲೀಸರು ದಾಳಿ ನಡೆಸಿದ್ದಾರೆ. ಛಾಯಾ ಹಾಗೂ ಮಹಾದೇವ ಅವರು ಬೇರೆ ಬೇರೆ ಮನೆಯವರಾಗಿದ್ದು, ಪ್ರತ್ಯೇಕವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದರು. ಬಂಧಿತರಿಂದ ಸುಮಾರು 14,640 ರೂಪಾಯಿ ಬೆಲೆಬಾಳುವ ಐದು ಮದ್ಯದ ಬಾಕ್ಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.