ADVERTISEMENT

ಅತ್ಯಾಚಾರಿಗೆ 10 ವರ್ಷ ಕಠಿಣ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 6:53 IST
Last Updated 10 ಮಾರ್ಚ್ 2018, 6:53 IST

ಧಾರವಾಡ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ  ವಿಶೇಷ ನ್ಯಾಯಾಲಯ, 10 ವರ್ಷ ಕಠಿಣ ಶಿಕ್ಷೆ ಹಾಗೂ ₹ 5,000  ದಂಡ ವಿಧಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಹಳೇ ಹುಬ್ಬಳ್ಳಿ ಕೃಷ್ಣಾಪುರ ಓಣಿಯ ಸಂತೋಷ ಕೆರೂರ ಎಂಬಾತ 2013 ರ ಮಾರ್ಚ್‌ 11 ರಂದು ಅಪ್ರಾಪ್ತೆಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಹಳೇ ಹುಬ್ಬಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸಾವಿತ್ರಿ ಕುಜ್ಜಿ, ಶಿಕ್ಷೆ ವಿಧಿಸಿ, ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ಗಿರಿಜಾ ತಮ್ಮಿನಾಳ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT