ADVERTISEMENT

ಅನಧಿಕೃತ 181 ಅಂಗಡಿಗಳ ತೆರವು

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2017, 11:12 IST
Last Updated 11 ಏಪ್ರಿಲ್ 2017, 11:12 IST

ಹುಬ್ಬಳ್ಳಿ: ಇಲ್ಲಿನ ಪ್ರಮುಖ ರಸ್ತೆಗಳ ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿ, ನಿರ್ಮಿಸಿಕೊಂಡಿದ್ದ ಅಂಗಡಿಗಳನ್ನು ಮಹಾನಗರ ಪಾಲಿಕೆ ಸಿಬ್ಬಂದಿ ಸೋಮವಾರ ಬೆಳಿಗ್ಗೆ ತೆರವುಗೊಳಿಸಿದರು.

ಪೊಲೀಸ್‌ ಭದ್ರತೆಯೊಂದಿಗೆ ಪಾಲಿಕೆಯ ಸಿಬ್ಬಂದಿ ಮತ್ತು ವಾಹನಗಳೊಂದಿಗೆ ಕಾರ್ಯಾಚರಣೆ ನಡೆಸಿದ ಆಯುಕ್ತರು, ಅಂಗಡಿಗಳನ್ನು ತೆರವುಗೊಳಿಸಿದರು.ತೆರವು ಕಾರ್ಯಾಚರಣೆಗೆ ಅಂಗಡಿ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಯಿತು. ವಲಯ 4 ರಲ್ಲಿ 2, ವಲಯ 5ರಲ್ಲಿ 25, ವಲಯ 6 ಮತ್ತು 8ರಲ್ಲಿ 50, ವಲಯ 7ರಲ್ಲಿ 19, ವಲಯ 9ರಲ್ಲಿ 40, ವಲಯ 10ರಲ್ಲಿ 8 ಹಾಗೂ ವಲಯ 11ರಲ್ಲಿ 37 ಸೇರಿದಂತೆ ಒಟ್ಟು 181 ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಿರುವುದಾಗಿ ಮಹಾನಗರ ಪಾಲಿಕೆ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ.

ಪಾದಚಾರಿ ಮಾರ್ಗ ಒತ್ತುವರಿ ಮಾಡಿ ಮತ್ತು ರಸ್ತೆಗಳನ್ನು ಅತಿಕ್ರಮಿಸಿಕೊಂಡು ಶಾಶ್ವತ ನಿರ್ಮಾಣವನ್ನು ಮಾಡಿಕೊಂಡಿದ್ದ ಅಂಗಡಿ, ತಳ್ಳು ಗಾಡಿಗಳನ್ನು ತೆರವುಗೊಳಿಸಲಾಗಿದೆ ಎಂದರು.ತೆರವು ಕಾರ್ಯಾಚರಣೆ ನಿರಂತರವಾಗಿ ನಡೆಯಲಿದೆ.  ಇದರಲ್ಲಿ ಯಾವುದೇ ವೈಯಕ್ತಿಕ ಹಿತಾಸಕ್ತಿ ಇಲ್ಲ. ಸಾರ್ವಜನಿಕ ಹಿತದೃಷ್ಟಿಯಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.