ADVERTISEMENT

ಅವಿಶ್ವಾಸ ಮಂಡನೆ ಸಭೆಗೆ ಮಧ್ಯಂತರ ತಡೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 6:52 IST
Last Updated 10 ಮಾರ್ಚ್ 2018, 6:52 IST

ಧಾರವಾಡ: ಕಲಘಟಗಿ ತಾಲ್ಲೂಕಿನ ಮುತ್ತಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ನಿಗದಿಯಾಗಿದ್ದ ಸಭೆಗೆ ಇಲ್ಲಿನ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ತಡೆ ನೀಡಿದೆ.

ಸಭೆ ನಿಗದಿಪಡಿಸಿ ಉಪವಿಭಾಗಾಧಿಕಾರಿ ಹೊರಡಿಸಿದ್ದ ನೋಟಿಸ್‌ ಪ್ರಶ್ನಿಸಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಲೀಲಾವತಿ ಲಮಾಣಿ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ಏಕಸದಸ್ಯಪೀಠ, ತಡೆ ನೀಡಿದೆ.  

ಮಾ.12 ರಂದು ನಿಗದಿಯಾಗಿತ್ತು. ಅರ್ಜಿದಾರರ ಪರ ಜಿ.ಎಚ್‌.ನಾಯ್ಕ್ ವಕಾಲತ್ತು ವಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.