ADVERTISEMENT

ಖಾದಿ ಗ್ರಾಮೋದ್ಯೋಗಕ್ಕೆ ಬಜೆಟ್‌ನಲ್ಲಿ ₹ 500ಕೋಟಿ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2017, 9:28 IST
Last Updated 29 ಡಿಸೆಂಬರ್ 2017, 9:28 IST

ಧಾರವಾಡ: ‘ನೇಕಾರರ ಮೂಲಸೌಕರ್ಯಕ್ಕೆ ಹಾಗೂ ಖಾದಿ ಗ್ರಾಮೋದ್ಯೋಗಕ್ಕೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಈ ಬಾರಿ ಬಜೆಟ್‌ನಲ್ಲಿ  ₹500 ಕೋಟಿ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ’ ಎಂದು ಕರ್ನಾಟಕ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ರಾಜ್ಯ ನಿರ್ದೇಶಕ ಶರಣಪ್ಪ ಕೊಟಗಿ ತಿಳಿಸಿದರು.

‘ಗಾಂಧೀಜಿ ಅವರ ಗ್ರಾಮ ಸ್ವರಾಜ್ಯ ಪರಿಕಲ್ಪನೆಯನ್ನು ಸಾಕಾರಗೊಳಿಸಲು ವಿವಿಧ ಯೋಜನೆ ಹಮ್ಮಿಕೊಳ್ಳಲಾಗಿದೆ. ಖಾದಿಯನ್ನು ಇನ್ನಷ್ಟು ಉತ್ತೇಜಿಸಲು ಆರ್ಥಿಕ ನೆರವಿನ ಅಗತ್ಯವಿದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಉದ್ಯೋಗ ಸೃಷ್ಟಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 35 ಫಲಾನುಭವಿಗಳಿಗೆ ₹80 ಲಕ್ಷ ಹಣ ಮಂಜೂರು ಆಗಿದೆ. ಖಾದಿ ಮತ್ತು ಗ್ರಾಮೋದ್ಯೋಗ ಸಂಸ್ಥೆ ಉತ್ಪಾದಿಸಿದ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜಿಸುವ ಮೂಲಕ ಜನರನ್ನು ತಲುಪಲಾಗುತ್ತಿದೆ’ ಎಂದರು.

ADVERTISEMENT

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕೊಟಗಿ, ‘1978ರಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಹಲವಾರು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಹುಬ್ಬಳ್ಳಿ ಧಾರವಾಡ ಪಶ್ಚಿಮ ಮತಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ಟಿಕೆಟ್‌ ದೊರೆಯುವ ಭರವಸೆ ಇದೆ’ ಎಂದು ಹೇಳಿದರು. ವಸಂತ ಅರ್ಕಾಚಾರ, ಮುತ್ತುರಾಜ ಮಾಕಡವಾಲೆ, ಮೋಹನ ಹೊಸಮನಿ, ಸಿ.ಪಿ. ನಾರಾಯಣಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.