ADVERTISEMENT

ಧಾರವಾಡದಲ್ಲಿ ನ್ಯಾಯಾಂಗ ತರಬೇತಿ ಅಕಾಡೆಮಿ ಶಾಖೆ ಆರಂಭಕ್ಕೆ ಚರ್ಚೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2019, 7:46 IST
Last Updated 8 ಜೂನ್ 2019, 7:46 IST
   

ಹುಬ್ಬಳ್ಳಿ: ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖಾ ನೌಕರರ ಸಂಘದ ರಾಜ್ಯ ಪರಿಷತ್ ಸಭೆಗೆ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಚಾಲನೆ ನೀಡಿದರು.

ನ್ಯಾಯಾಂಗ ನೌಕರರಿಗೆ ತರಬೇತಿ ನೀಡುವ ಸಲುವಾಗಿ ಧಾರವಾಡದಲ್ಲಿ ನ್ಯಾಯಾಂಗ ತರಬೇತಿ ಅಕಾಡೆಮಿ ಶಾಖೆಯನ್ನು ಆರಂಭಿಸಲು ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದರು.

ನ್ಯಾಯಕ್ಕೆ ಚ್ಯುತಿ ಬಾರದಂತೆ ನ್ಯಾಯಾಂಗ ಇಲಾಖೆ ನೌಕರರು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ADVERTISEMENT

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಅಧ್ಯಕ್ಷ ನಾಗೇಶ್ ಎಚ್.ಎ., ಹೊಸ ನ್ಯಾಯಾಲಯಗಳಿಗೆ ಸೂಕ್ತ ಸಿಬ್ಬಂದಿ ನೇಮಕ ಮಾಡಬೇಕು. ನೂತನ ಪಿಂಚಣಿ ವ್ಯವಸ್ಥೆಯನ್ನು ರದ್ದು ಪಡಿಸಬೇಕು. ನೌಕರರ ಅಂತರ ಜಿಲ್ಲಾ ವರ್ಗಾವಣೆ ನೀತಿ ಜಾರಿಗೊಳಿಸಬೇಕು. ನೌಕರರ ಕುಂದುಕೊರತೆಗಳನ್ನು ಆಲಿಸಲು ಜಿಲ್ಲಾ ಮಟ್ಟದಲ್ಲಿ ಕುಂದುಕೊರತೆ ಸಮಿತಿ ರಚಿಸಬೇಕು. ನೌಕರರಿಗೆ ನೀಡುವ ಸೇವಾ ಸೌಲಭ್ಯಗಳನ್ನು ವಿಳಂಬವಿಲ್ಲದೆ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂಬ ಬೇಡಿಕೆಗಳ ಈಡೇರಿಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ನ್ಯಾಯಮೂರ್ತಿ ದಿನೇಶ್ ಕುಮಾರ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಜ್ಯ ಪರಿಷತ್ ಸಭೆಗೆ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.