ಧಾರವಾಡ: ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆಗೆ ನೆರವಿಗೆ ಬಂದ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ, ನೀರು ಕುಡಿಸಿ ಟಂಟಂ ವಾಹನದಲ್ಲಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದರು.
ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಲ್ಲಿ ಹೈಕೋರ್ಟ್ ಸಮೀಪ ಬುಧವಾರ ಅಪಘಾತದಲ್ಲಿ ಮಹಿಳೆ ಗಾಯಗೊಂಡಿದ್ದರು.
ಬಸ್‌ನಿಂದ ಇಳಿದ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿಯಾಗಿತ್ತು. ನೆರವಿಗೆ ಬಂದ ಸಚಿವ ವಿನಯ ಕುಲಕರ್ಣಿ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.