ADVERTISEMENT

ಫ್ಯಾಷನ್ ಶೋದಲ್ಲೂ ಮತ ಜಾಗೃತಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2018, 8:03 IST
Last Updated 12 ಏಪ್ರಿಲ್ 2018, 8:03 IST
ಧಾರವಾಡ ಆಲೂರ ವೆಂಕಟರಾವ್‌ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಫ್ಯಾಷನ್‌ ಶೋ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಸ್ನೇಹಲ್‌ ರಾಯಮಾನೆ ಮತದಾನದ ಕುರಿತು ಜಾಗೃತಿ ಮೂಡಿಸಿದರು.
ಧಾರವಾಡ ಆಲೂರ ವೆಂಕಟರಾವ್‌ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಫ್ಯಾಷನ್‌ ಶೋ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಸ್ನೇಹಲ್‌ ರಾಯಮಾನೆ ಮತದಾನದ ಕುರಿತು ಜಾಗೃತಿ ಮೂಡಿಸಿದರು.   

ಧಾರವಾಡ: ‘ಮತದಾರ ಪಟ್ಟಿಯಲ್ಲಿರುವ ಪ್ರತಿಯೊಬ್ಬರೂ ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಮತದಾನ ಬಹಳ ಮುಖ್ಯವಾಗಿದೆ’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಸ್ನೇಹಲ್ ರಾಯಮಾನೆ ಹೇಳಿದರು.

ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್ಎಸ್ಎಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಫ್ಯಾಷನ್ ಶೋ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್. ನಾಗೂರ ಮಾತನಾಡಿ, ‘ವಿದ್ಯಾರ್ಥಿಗಳು ಯಾವುದೇ ಕೆಲಸವನ್ನು ಶ್ರದ್ಧೆಯಿಂದ ಮಾಡಬೇಕು. ಸತತ ಪ್ರಯತ್ನದಿಂದ ಯಶಸ್ಸು ದೊರೆಯುತ್ತದೆ’ ಎಂದು ಹೇಳಿದರು.

ADVERTISEMENT

ಬ್ಯಾಚುಲರ್ ಆಫ್ ಫ್ಯಾಷನ್ ಟೆಕ್ನಾಲಜಿ ವಿಭಾಗದ ವಿದ್ಯಾರ್ಥಿಗಳು ನೂತನವಾಗಿ ವಿನ್ಯಾಸ ಮಾಡಿದ 66 ಉಡುಪುಗಳನ್ನು ಪ್ರದರ್ಶಿಸಿದರು. ಇವುಗಳನ್ನು ತೊಟ್ಟ ರೂಪದರ್ಶಿಯರು ಮಾರ್ಜಾಲ ನಡಿಗೆ ಮೂಲಕ ರ‍್ಯಾಂ ಪ್ ವಾಕ್ ಮಾಡಿದರು. ಕೈಯಲ್ಲಿ ಮತದಾನದ ಮಹತ್ವ ಸಾರುವ ಫಲಕ ಹಿಡಿದು ಸಾಗಿದ್ದು ಎಲ್ಲರ ಗಮನ ಸೆಳೆಯಿತು.

ಧಾರವಾಡ ಶಹರದ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯೆ ಡಾ. ಸರಸ್ವತಿ ಕಳಸದ ಅಧ್ಯಕ್ಷತೆ ವಹಿಸಿದ್ದರು. ಎಂ.ಜೆ. ಜಾಲರಡ್ಡಿ, ಗೀತಾ ಮಹಾಲೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.