ADVERTISEMENT

ಬಸ್‌ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2018, 6:41 IST
Last Updated 6 ಜೂನ್ 2018, 6:41 IST
ಹುಬ್ಬಳ್ಳಿಯ ಗೋಕುಲ ರಸ್ತೆಯ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಬಳಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು
ಹುಬ್ಬಳ್ಳಿಯ ಗೋಕುಲ ರಸ್ತೆಯ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಬಳಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು   

ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆಯ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಬಳಿ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಚತ್‌ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ಹಿಂದಿನ ಕಾಂಗ್ರೆಸ್‌ ಸರ್ಕಾರ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ 2018–19ನೇ ಸಾಲಿನಿಂದ ಉಚಿತ ಬಸ್‌ ಪಾಸ್‌ ವಿತರಣೆ ಮಾಡಲಾಗುವುದು ಎಂದು ಘೋಷಿಸಿತ್ತು. ಆದರೆ, ಪ್ರಸ್ತುತ ರಾಜ್ಯ ಸರ್ಕಾರ ವಿರುದ್ಧ ಧೋರಣೆ
ಹೊಂದಿದೆ. ಕೂಡಲೇ ರಾಜ್ಯದ ಎಲ್ಲ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಬೇಕು ಎಂದು ಆಗ್ರಹಿಸಿದರು.

ನಗರ ಸಹ ಕಾರ್ಯದರ್ಶಿ ಶ್ರೀನಿವಾಸ ಟೊಣವೆ, ತೇಜಸ್‌ ಗೋಕಾಕ, ಸಿದ್ದು ಹವಳಗಿ, ಸಚಿನ್‌ ರಾಯಬಾಗಕರ, ಅಭಿಷೇಕ, ಸಮೀರ್‌ ಗಡದ, ಶಿವು ಮುಂತಾದವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.