ADVERTISEMENT

‘ಬಿಎಸ್‌ವೈ ಪ್ರಯತ್ನಕ್ಕೆ ಕಾಂಗ್ರೆಸ್‌ ಭಂಗ’

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2017, 9:31 IST
Last Updated 29 ಡಿಸೆಂಬರ್ 2017, 9:31 IST
ಧಾರವಾಡದ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ ಬಿಜೆಪಿ ನಾಯಕರನ್ನು ಪೊಲೀಸರು‌ ತಡೆದರು
ಧಾರವಾಡದ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ ಬಿಜೆಪಿ ನಾಯಕರನ್ನು ಪೊಲೀಸರು‌ ತಡೆದರು   

ಧಾರವಾಡ: ಮಹದಾಯಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದರೂ, ಕಾಂಗ್ರೆಸ್‌ ನಾಯಕರು ಅದಕ್ಕೆ ಭಂಗ ತರುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಹುಬ್ಬಳ್ಳಿ–ಧಾರವಾಡ ಪಶ್ಚಿಮ ಹಾಗೂ ಧಾರವಾಡ ಕ್ಷೇತ್ರದ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಗುರುವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಕಚೇರಿ ಎದುರು ಬೆಳಿಗ್ಗೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ, ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು, ನಂತರ ಬಿಡುಗಡೆ ಮಾಡಿದರು.

ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಈಶ್ವರಚಂದ್ರ ಹೊಸಮನಿ ಮಾತನಾಡಿ, ‘ಗೋವಾ ಮುಖ್ಯಮಂತ್ರಿ ಪರಿಕ್ಕರ್ ಅವರ ಮನವೊಲಿಸಿ ರೈತರಿಗೆ ಸಂತಸದ ಸುದ್ದಿ ನೀಡಿದ್ದು ಕಾಂಗ್ರೆಸ್‌ಗೆ ಸಹಿಸಲಾಗುತ್ತಿಲ್ಲ. ಹೀಗಾಗಿ ಅವರ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸುತ್ತಿದೆ’ ಎಂದರು.

ADVERTISEMENT

ನಾಯಕಿ ಸೀಮಾ ಮಸೂತಿ ಮಾತನಾಡಿ, ‘ನೀತಿಗೆಟ್ಟ ರಾಜಕಾರಣ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನತೆ ಹಾಗೂ ರೈತರು ತಕ್ಕ ಉತ್ತರ ನೀಡಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.