ADVERTISEMENT

‘ಬೇಡಿಕೆಗೆ ಸ್ಪಂದಿಸದಿದ್ದರೆ ಕಚೇರಿಗಳಿಗೆ ಮುತ್ತಿಗೆ’

ಜಿಲ್ಲೆಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್; ನವಲಗುಂದದಲ್ಲಿ ಹೆಚ್ಚಿನ ಭದ್ರತೆ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2017, 8:40 IST
Last Updated 28 ಡಿಸೆಂಬರ್ 2017, 8:40 IST

ಧಾರವಾಡ: ಕಳಸಾ ಬಂಡೂರಿ, ಮಹದಾಯಿ ಹೋರಾಟಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಕಾವು ತೀವ್ರತೆ ಪಡೆದಿದ್ದು, ಹೋರಾಟಕ್ಕೆ ಸ್ಪಂದಿಸದಿದ್ದರೆ ಜ. 2ರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಚೇರಿಗಳಿಗೆ ಮುತ್ತಿಗೆ ಹಾಕಲಾಗುವುದು ಎಂದು ಕಳಸಾ ಬಂಡೂರಿ ಹೋರಾಟಗಾರರು ಹೇಳಿದರು.

ಬುಧವಾರ ನಡೆಯಲಿರುವ ಉತ್ತರ ಕರ್ನಾಟಕ ಬಂದ್ ಕುರಿತಂತೆ ಇಲ್ಲಿನ ಸರ್ಕಿಟ್ ಹೌಸ್‌ನಲ್ಲಿ ಮಂಗಳವಾರ ಚರ್ಚಿಸಿದ ಮುಖಂಡರಾದ ಲಕ್ಷ್ಮಣ ಬಕ್ಕಾಯಿ, ಸಲೀಂ ಸಂಗನಮಲ್ಲ, ‘ಈಗಾಗಲೇ ಹಲವಾರು ಬಾರಿ ಪ್ರತಿಭಟನೆ ಮಾಡುವ ಮೂಲಕ ಬಂದ್ ಮಾಡಲಾಗಿದೆ. ಆದರೂ ಈವರೆಗೆ ಎರಡೂ ಸರ್ಕಾರಗಳು ಸರಿಯಾಗಿ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಹೋರಾಟದ ತೀವ್ರತೆ ಹೆಚ್ಚಿಸಬೇಕಾಗಿದ್ದು, ಪ್ರತಿಯೊಬ್ಬರೂ ಬಂದ್‌ಗೆ ಸಂಪೂರ್ಣವಾಗಿ ಬೆಂಬಲಿಸಬೇಕು’ ಎಂದು ವಿವಿಧ ಸಂಘಟನೆಗಳಲ್ಲಿ ಮನವಿ ಮಾಡಿದರು.

ರೈತ ಸೇನಾ ಕರ್ನಾಟಕ ರಾಜ್ಯಘಟಕದ ಅಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದಲ್ಲಿ ಮಹದಾಯಿ ಹೋರಾಟಗಾರರು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ, ಬಿಜೆಪಿ ನಾಯಕರು ಕಚೇರಿ ಮುಂದೆ ಏಕೆ ಕುಳಿತಿರುತ್ತೀರಿ..? ಎದ್ದು ಹೋಗಿರಿ ಎಂದು ಹೇಳುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.