ADVERTISEMENT

ಮತದಾನ: ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2018, 8:59 IST
Last Updated 24 ಫೆಬ್ರುವರಿ 2018, 8:59 IST

ಧಾರವಾಡ: ‘ಮತದಾರರೆಲ್ಲರೂ ತಪ್ಪದೇ ಮತದಾನ ಮಾಡುವ ಮೂಲಕ ಶ್ರೇಷ್ಠ ಹಾಗೂ ಬಲಿಷ್ಠ ಪ್ರಜಾಪ್ರಭುತ್ವ ಕಟ್ಟಲು ಸಹಕರಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಸ್ನೇಹಲ್ ರಾಯಮಾನೆ ಹೇಳಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ಡಿ.ಎಲ್.ಇಡಿ. ಕಾಲೇಜುಗಳ ಸಮಾವೇಶದ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಚ್ಛತಾ ಆಂದೋಲನದಲ್ಲಿ ಶುಕ್ರವಾರ ಅವರು ಮಾತನಾಡಿದರು.

‘ಪ್ರಜಾಪ್ರಭುತ್ವದ ಘನತೆ ಅರಿಯಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ, ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಶ್ರಮಿಸಬೇಕು’ ಎಂದರು.

ADVERTISEMENT

ಡಯಟ್ ಪ್ರಾಚಾರ್ಯೆ ಸುಮಂಗಳಾ ಕುಚಿನಾಡ, ಉಪ ಪ್ರಾಚಾರ್ಯೆ ಸಾಯಿರಾಬಾನು ಖಾನ್, ಹಿರಿಯ ಉಪನ್ಯಾಸಕರುಗಳಾದ ಎಸ್.ಬಿ. ಬಿಂಗೇರಿ, ಮಂಗಲಾ ಪಾಟೀಲ, ವೈ.ಬಿ. ಬಾದವಾಡಗಿ, ಜಯಶ್ರೀ ಕಾರೇಕರ, ಶಿಕ್ಷಕಿಯರ ಸರಕಾರಿ ತರಬೇತಿ ಸಂಸ್ಥೆಯ ಪ್ರಾಚಾರ್ಯ ಶ್ರೀಶೈಲ ಕರಿಕಟ್ಟಿ, ಜೀವನ ಶಿಕ್ಷಣ ಮಾಸಪತ್ರಿಕೆಯ ಸಹ ಸಂಪಾದಕ ಗುರುಮೂರ್ತಿ ಯರಗಂಬಳಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.