ADVERTISEMENT

ರೈತರ ಭೂಮಿ ಖಾಸಗಿಯವರಿಗೆ ಮಂಜೂರು: ಹೊರಟ್ಟಿ ಆರೋಪ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2018, 9:39 IST
Last Updated 14 ಮಾರ್ಚ್ 2018, 9:39 IST

ಹುಬ್ಬಳ್ಳಿ: ‘ವಿಮಾನ ನಿಲ್ದಾಣಕ್ಕಾಗಿ ವಶಪಡಿಸಿಕೊಂಡಿದ್ದ ಒಂದಷ್ಟು ಭೂಮಿಯನ್ನು ರೈತರಿಗೆ ಹಿಂತಿರುಗಿಸದೆ, ಖಾಸಗಿಯವರಿಗೆ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ’ ಎಂದು ಸರ್ಕಾರಿ ಭರವಸೆಗಳ ಸಮಿತಿ‌ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕಾಗಿ 707 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 597 ಎಕರೆ ಭೂಮಿಯನ್ನು ಮಾತ್ರ ಬಳಸಿಕೊಳ್ಳಲಾಗಿದೆ. ಉಳಿದ 110 ಎಕರೆಗೂ ಹೆಚ್ಚು ಜಾಗವನ್ನು ಬೇರೆ ಉದ್ದೇಶಕ್ಕೆ ನೀಡಲಾಗಿದೆ’ ಎಂದು ಹೇಳಿದರು.

‘ಇನ್ಫೊಸಿಸ್, ದೇಶಪಾಂಡೆ ಫೌಂಡೇಷನ್‌ನ ಕೌಶಲ ತರಬೇತಿ ಕೇಂದ್ರ, ಅನಂತ ರೆಸಿಡೆನ್ಸಿ, ಗಾಮನಗಟ್ಟಿಯ ತಿರುಮಲ ಎಂಟರ್‌ಪ್ರೈಸಸ್‌
ನಂತಹ ಖಾಸಗಿ ಸಂಸ್ಥೆಗಳಿಗೆ ನೀಡಲಾಗಿದೆ’ ಎಂದು ಅವರು ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.