ADVERTISEMENT

ಲೋಕಸಭಾ ಚುನಾವಣೆಗೆ ಸ್ಪರ್ಧೆ: ಎಸ್‌.ಆರ್.ಹಿರೇಮಠ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2017, 6:21 IST
Last Updated 6 ಅಕ್ಟೋಬರ್ 2017, 6:21 IST
ಎಸ್‌.ಆರ್‌.ಹಿರೇಮಠ
ಎಸ್‌.ಆರ್‌.ಹಿರೇಮಠ   

ಧಾರವಾಡ: ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌.ಹಿರೇಮಠ ಗುರುವಾರ ಇಲ್ಲಿ ಹೇಳಿದರು.

ಜನಸಂಗ್ರಾಮ ಪರಿಷತ್‌ ಸೇರಿದಂತೆ ವಿವಿಧ ಸಂಘಟನೆ ಹಾಗೂ ಪಕ್ಷಗಳ ಮಹಾಮೈತ್ರಿಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದರು.

ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದು ಇನ್ನೂ ತೀರ್ಮಾನವಾಗಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮಹಾಮೈತ್ರಿಯ ಅಭ್ಯರ್ಥಿಗಳು ರಾಜ್ಯ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲೂ ಸ್ಪರ್ಧಿಸಲಿದ್ದಾರೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.