ಬೆಂಗಳೂರು: ಅಕ್ರಮ ಗಣಿಗಾರಿಕೆ ಯಿಂದ ರಾಜ್ಯದ ಬೊಕ್ಕಸಕ್ಕೆ ₨ 642 ಕೋಟಿ ನಷ್ಟವನ್ನುಂಟು ಮಾಡಿದ ಆರೋಪ ಎದುರಿಸುತ್ತಿರುವ ಹಾಲಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ವಿಚಾರಣೆ ನಡೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಸುದ್ದಿಗಾರರಿಗೆ ತಿಳಿಸಿದರು.
ಮೈಸೂರು ಮಿನರಲ್ಸ್ ಲಿಮಿ ಟೆಡ್‌ನ (ಎಂಎಂಎಲ್) ವ್ಯವಸ್ಥಾಪಕ ನಿರ್ದೇಶಕ ರಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭ ದಲ್ಲಿ ಅಧಿಕಾರಿಗಳು ಎಸಗಿ ರುವ ಲೋಪಗಳಿಂದಾಗಿ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.
ಹಿಂದೆ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ನೀಡಿದ ವರದಿಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಭಾಗಿಯಾದ ಅಧಿಕಾರಿಗಳ ಹೆಸರುಗಳನ್ನು ಪ್ರಸ್ತಾಪಿಸ ಲಾಗಿತ್ತು.
ಆ ವರದಿ ಆಧರಿಸಿ ಹೆಚ್ಚುವರಿ ಮುಖ್ಯಕಾರ್ಯದರ್ಶಿ ವಿ.ಉಮೇಶ್, ಐಎಎಸ್ ಅಧಿಕಾರಿಗಳಾದ ಮಹೇಂದ್ರ ಜೈನ್, ನಿವೃತ್ತ ಐಎಎಸ್ ಅಧಿಕಾರಿ ಗಳಾದ ಐ.ಆರ್.ಪೆರುಮಾಳ್, ಡಿ. ಎಸ್.ಅಶ್ವತ್ಥ್, ಜಿ.ವಿ.ಕೊಂಗವಾಡ, ಕೆ.ಎಸ್.ಮಂಜುನಾಥ್ ಅವರನ್ನು ವಿಚಾರಣೆಗೆ ಒಳಪಡಿಸಲು ಲೋಕಾ ಯುಕ್ತಕ್ಕೆ ವಹಿಸಲಾಗಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಾಮೂಹಿಕ ಜವಾಬ್ದಾರಿ ಇದೆ. ವೈಯಕ್ತಿಕವಾಗಿ ಇಲಾಖಾ ಮುಖ್ಯಸ್ಥರ ಪಾತ್ರ ಇರುವುದಿಲ್ಲ. ಆದ್ದರಿಂದ ಅವರ ಮೇಲಿನ ಪ್ರಕರಣಗಳನ್ನು ಕೈಬಿಡಬೇಕು. ವಿಚಾರಣೆಗೆ ಒಳಪಡಿಸುವ ಅಗತ್ಯವಿಲ್ಲ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶಿಫಾರಸು ಮಾಡಿತ್ತು ಎನ್ನಲಾಗಿದೆ.
ಆದರೆ, ಈ ಸಲಹೆಯನ್ನು ತಿರಸ್ಕರಿ ಸಿರುವ ಸಂಪುಟ ಸಭೆ ಅಧಿಕಾರಿ ಗಳ ವಿರುದ್ಧ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ. ಲೋಕಾಯುಕ್ತದಲ್ಲಿ ಈಚೆಗೆ ಹೊಸದಾಗಿ ರಚನೆ ಆಗಿರುವ ವಿಶೇಷ ತನಿಖಾ ತಂಡ ಆರೋಪಕ್ಕೆ ಒಳಗಾಗಿ ರುವವರನ್ನು ವಿಚಾರಣೆಗೆ ಒಳಪಡಿ ಸಲಿದೆ. ಅಕ್ರಮ ಗಣಿಗಾರಿಕೆಯಲ್ಲಿ ತಮ್ಮ ಪಾತ್ರ ಇಲ್ಲ ಎಂದು ಹಾಲಿ ಹಾಗೂ ನಿವೃತ್ತ ಅಧಿಕಾರಿಗಳು ವೈಯಕ್ತಿಕವಾಗಿ ನೀಡಿದ್ದ ಸಮಜಾಯಿಷಿಯನ್ನು ತಿರಸ್ಕ ರಿಸಲಾಗಿದೆ ಎಂದು ಸಚಿವ ಜಯಚಂದ್ರ ತಿಳಿಸಿದರು.
ಅಕ್ರಮ ಆಸ್ತಿ ಹೊಂದಿದ ಪ್ರಕರಣ: ಇದಲ್ಲದೆ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ ಲೋಕಾಯುಕ್ತ ದಾಳಿಗೆ ಒಳಗಾಗಿರುವ ನಿವೃತ್ತ ಐಎಎಸ್ ಅಧಿಕಾರಿಗಳಾದ ಎಂ.ಕೆ.ಬಲದೇವಕೃಷ್ಣ, ಬಾಬುರಾವ್ ಮುಡಬಿ, ಡಾ.ವಿ.ಚಂದ್ರಶೇಖರ್, ಐಪಿಎಸ್ ಅಧಿಕಾರಿ ಡಿ.ಸಿ.ರಾಜಪ್ಪ ವಿರುದ್ಧ ಕ್ರಮಕೈಗೊಳ್ಳಲು ಅನುಮತಿ ನೀಡುವಂತೆ ಕೋರಿ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ.
ಸರಳೀಕರಣ: ಕರ್ನಾಟಕ ಭೂ ಸುಧಾ ರಣಾ ಕಾಯ್ದೆ 1961ರ ಕಲಂ 109 ಹಾಗೂ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95ಕ್ಕೆ ತಿದ್ದುಪಡಿ ತರಲು ಸಂಪುಟ ಒಪ್ಪಿಗೆ ನೀಡಿದೆ. ಭೂ ಸ್ವಾಧೀನ ಮತ್ತು ಪರಿವ ರ್ತನೆ ಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ತಿದ್ದುಪಡಿ ತರಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.
ಅರಣ್ಯ: ಡೀಮ್ಡ್ ಅರಣ್ಯ ಮತ್ತು ಕಂದಾಯ ಭೂಮಿಯನ್ನು ಸ್ಪಷ್ಟವಾಗಿ ಗುರುತಿಸುವ ಉದ್ದೇಶದಿಂದ ಜಿಲ್ಲಾ, ವಿಭಾಗ ಮತ್ತು ರಾಜ್ಯಮಟ್ಟದಲ್ಲಿ ಸಮಿತಿಗಳನ್ನು ರಚಿಸಲು ತೀರ್ಮಾನಿ ಸಲಾಗಿದೆ.
ಅನೇಕ ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ವಾಸ ಮಾಡುತ್ತಿರು ವವರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿರುವ ಕಾರಣ ಯಾವುದು, ಅರಣ್ಯ ಭೂಮಿ, ಯಾವುದು ಕಂದಾಯ ಭೂಮಿ ಎಂದು ಸ್ಪಷ್ಟವಾಗಿ ಗುರುತಿಸಿ ಅರಣ್ಯವಾಸಿಗಳಿಗೆ ನ್ಯಾಯ ದೊರಕಿಸಿ ಕೊಡುವ ಕೆಲಸ ವನ್ನು ಸಮಿತಿಗಳು ಮಾಡಲಿವೆ.
ಆರು ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಆ ನಂತರ ಮತ್ತೆ ಸಚಿವ ಸಂಪುಟದ ಮುಂದೆ ಈ ವಿಷ ಯವನ್ನು ತಂದು ವಾಸ್ತವಾಂಶವನ್ನು ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡ ಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.