ADVERTISEMENT

ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವಿತರಣೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2012, 2:30 IST
Last Updated 7 ಜುಲೈ 2012, 2:30 IST

ಧಾರವಾಡ: ಇಲ್ಲಿಯ ಶೀಲವಂತರ ಓಣಿಯಲ್ಲಿರುವ ಸರ್ಕಾರಿ ಉರ್ದು ಹೆಣ್ಣು ಮಕ್ಕಳ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಣೆ ಹಾಗೂ ಬಸ್ ಪಾಸ್ ವಿತರಣೆ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಬಿ.ಕೆ.ಎಸ್.ವರ್ಧನ್ ಕಾರ್ಯಕ್ರಮ ಉದ್ಘಾಟಿಸಿ, `ಈ ಶಾಲೆಯಲ್ಲಿ ಶಿಕ್ಷಕರು ಹಳ್ಳಿಗಳಿಂದ, ಪಾಲಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದು ಅವರಿಗೆ ನೋಟ್‌ಬುಕ್ ಹಾಗೂ ಸ್ವತಃ ಶಿಕ್ಷಕರೇ ಹಣ ಕೊಟ್ಟು ಮಕ್ಕಳಿಗೆ ಬಸ್‌ಪಾಸ್ ನೀಡುತ್ತಿರುವ ಕಾರ್ಯ ಶ್ಲಾಘನೀಯ. ಇದರಿಂದ ಇತರೆ ಸರ್ಕಾರಿ ಶಾಲೆಗಳಿಗೆ ಇದು ಮಾದರಿ ಶಾಲೆಯಾಗಿದೆ~ ಎಂದರು. 

ಅಧ್ಯಕ್ಷತೆ ವಹಿಸಿದ್ದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ, `ಪ್ರತಿ ವರ್ಷ ಈ ಶಾಲೆಯ ಶಿಕ್ಷಕರು ಬಡ ಮಕ್ಕಳಿಗೆ ಉಚಿತ ನೋಟ್‌ಬುಕ್ ಹಾಗೂ ಬಸ್‌ಪಾಸ್‌ಗಳನ್ನು ವಿತರಿಸುತ್ತಾ ಬಂದು ಮಕ್ಕಳ ದಾಖಲಾತಿಯನ್ನು ಹೆಚ್ಚಿಸಿದ್ದಾರೆ. ಹಳ್ಳಿಗಳಲ್ಲಿ ಹಣಕಾಸಿನ ತೊಂದರೆ ಇದ್ದ ರೈತ ಮತ್ತು ಕೂಲಿ ಕಾರ್ಮಿಕರ ಮಕ್ಕಳ ಶಿಕ್ಷಣ ಅರ್ಧಕ್ಕೆ ಮೊಟಕಯಗೊಳಿಸುವ ಪಾಲಕರನ್ನು ಮನವೊಲಿಸಿ ಮಕ್ಕಳ ದಾಖಲಾತಿ ಹೆಚ್ಚಿಸುತ್ತಿದ್ದಾರೆ~ ಎಂದರು.

ಇಲಾಖೆಯ ನೂತನ ಉಪನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಡಾ.ಬಿ.ಕೆ.ಎಸ್.ವರ್ಧನ್ ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ, ಜಿಲ್ಲಾ ಕಾರ್ಯದರ್ಶಿ ಸವಣೂರ, ದೈಹಿಕ ಶಿಕ್ಷಕ ಶಿ.ಹೊಗಿ, ಬಾರ್ಕಿ, ಲತಾ ಮುಳ್ಳೂರ, ವಿದ್ಯಾರ್ಥಿಗಳು ಹಾಗೂ ಪಾಲಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಚೌಧರಿ ನಿರೂಪಿಸಿದರು. ಕವಳಿಕಾಯಿ ಸ್ವಾಗತಿಸಿ, ವಂದಿಸಿದರು.

ಮಕ್ಕಳ ಆರೋಗ್ಯ ತಪಾಸಣೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ  6 ವರ್ಷದೊಳಗಿನ ಮಕ್ಕಳ ಅಪೌಷ್ಟಿಕತೆ ಕುರಿತು ಸರ್ವೆ ಕಾರ್ಯಜುಲೈ9 ರಿಂದ 15ರವರೆಗೆ ನಡೆಸಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.