ADVERTISEMENT

ಸಮಗ್ರ ಬೆಳೆ ಪದ್ಧತಿಯಿಂದ ಯಶಸ್ಸು ಸಾಧ್ಯ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2017, 6:33 IST
Last Updated 21 ಅಕ್ಟೋಬರ್ 2017, 6:33 IST

ಧಾರವಾಡ: ‘ಸಮಗ್ರ ಕೃಷಿ ಪದ್ಧತಿಗಳನ್ನು ರೈತ ಬಾಂಧವರು ಅಳವಡಿಸಿಕೊಂಡರೆ ಮಾತ್ರ ಲಾಭದಾಯಕ ಕೃಷಿ ಹಾಗೂ ಹೆಚ್ಚಿನ ಉತ್ಪಾದನೆ ಸಾಧ್ಯ’ ಎಂದು ಕೃಷಿ ತಜ್ಞ ಮಲ್ಲಣ್ಣ ನಾಗರಾಳ ಹೇಳಿದರು.

ಕೃಷಿ ವಿಶ್ವವಿದ್ಯಾಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಗುರುವಾರ ಆಯೋಜಿಸಿದ್ದ ‘ವಿಶ್ವ ಆಹಾರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಕೃಷಿಗೆ ಪೂರಕವಾದ ಹೈನುಗಾರಿಕೆ, ಕುರಿ ಸಾಕಾಣಿಕೆಗೆ ಮುಂದಾಗಬೇಕು. ಆಗ ಆರ್ಥಿಕ ಸಬಲತೆ ಪಡೆದುಕೊಳ್ಳಲು ಸಾಧ್ಯವಾಗುತ್ತದೆ’ ಎಂದರು. ಡಾ. ಬಿ.ಎಚ್. ನಾಗೂರ ಮಾತನಾಡಿ, ‘ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕಾರ್ಯ ನಿರ್ವಹಿಸುತ್ತಿದೆ. ವಿಜ್ಞಾನಿಗಳೊಂದಿಗೆ ಸಂಪರ್ಕ ಹೊಂದಿರಬೇಕು’ ಎಂದು ಹೇಳಿದರು.

ADVERTISEMENT

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವೈಜ್ಞಾನಿಕ ಅಧಿಕಾರಿ ಡಾ. ವಿ.ಕೆ. ಶ್ರೀನಿವಾಸ, ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ಸದಸ್ಯ ಈಶ್ವರಚಂದ್ರ ಹೊಸಮನಿ ಮಾತನಾಡಿದರು

ಅಕಾಡೆಮಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು. ನಂತರ ಬೆಂಗಳೂರಿನ ಎಚ್‌ಎಎಲ್ ಸಂಸ್ಥೆಯ ಮಯೂರ ಕಲಾ ಬಳಗದಿಂದ ‘ಬರ’  ನಾಟಕದ ಪ್ರದರ್ಶನಗೊಂಡಿತು.

ಕುಲಪತಿ ಡಾ. ಡಿ.ಪಿ. ಬಿರಾದಾರ, ವಿಸ್ತರಣಾ ನಿರ್ದೇಶಕ ಡಾ. ಎಚ್.ಬಸಪ್ಪ, ಡಾ.ಎಸ್.ಟಿ.ನಾಯಕ, ಡಾ.ಶುಭಾ, ಡಾ. ಎಸ್.ಕೆ.ಗಾಳಿ, ಡಾ.ಎಂ.ಗೋಪಾಲ, ಡಾ.ಬಿ.ಎನ್.ಅರವಿಂದಕುಮಾರ, ಡಾ.ವಿನುತಾ ಮುಕ್ತಾಮಠ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.