
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಕಾಮನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಆರು ಬೈಕ್ ಮತ್ತು ಕಾರೊಂದಕ್ಕೆ ದುಷ್ಕರ್ಮಿಗಳು ನಸುಕಿನ ನಾಲ್ಕು ಗಂಟೆ ಸುಮಾರಿಗೆ ಬೆಂಕಿ ಹಚ್ಚಿದ್ದಾರೆ.
ವಾಹನಗಳು ಸಂಪೂರ್ಣ ಸುಟ್ಟು ಹೋಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದರೂ ಯಾವುದೇ ಪ್ರಯೋಜನವಾಗಿಲ್ಲ.
ವಾಹನಗಳ ಮಾಲೀಕರು ಕಸಬಾಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.