ADVERTISEMENT

1 ರಿಂದ 5ನೇ ತರಗತಿ ಆರಂಭ | ವರದಿ ಆಧರಿಸಿ ತೀರ್ಮಾನ: ಸಚಿವ ಎಸ್. ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2021, 7:01 IST
Last Updated 2 ಮಾರ್ಚ್ 2021, 7:01 IST
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್   

ಹುಬ್ಬಳ್ಳಿ: ‘ಒಂದರಿಂದ ಐದನೇ ತರಗತಿಯನ್ನು ಆರಂಭಿಸಲು ಒತ್ತಡ ಕೇಳಿ ಬರುತ್ತಿದೆ. ಈ ಕುರಿತು ಆರೋಗ್ಯ ಇಲಾಖೆ ತಜ್ಞರ ವರದಿಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನೆರೆಯ ರಾಜ್ಯಗಳಲ್ಲಿ ಕೋವಿಡ್ –19 ಏರಿಕೆಯಾಗುತ್ತಿದ್ದು, ರಾಜ್ಯದಲ್ಲೂ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. 1ರಿಂದ 5ನೇ ತರಗತಿಗಳ ಆರಂಭಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಎದುರಾಗಬಹುದಾದ ಸಮಸ್ಯೆಗಳ ಕುರಿತು ತಜ್ಞರು ವರದಿ ನೀಡಲಿದ್ದಾರೆ. ಅದರ ಆಧಾರದ ಮೇಲೆ, ಶಾಲೆ ಆರಂಭಿಸಬೇಕೊ ಬೇಡವೊ ಎಂದು ತೀರ್ಮಾನಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT