ADVERTISEMENT

100 ಕೋಟಿ ವಿಶೇಷ ಪ್ಯಾಕೇಜ್‌ಗೆ ಒತ್ತಾಯ

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಅಭಿವೃದ್ಧಿ: ಶೆಟ್ಟರ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2019, 17:08 IST
Last Updated 5 ಆಗಸ್ಟ್ 2019, 17:08 IST

ಹುಬ್ಬಳ್ಳಿ: ‘ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರದಿಂದ ₹100 ಕೋಟಿ ವಿಶೇಷ ಪ್ಯಾಕೇಜ್‌ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಒತ್ತಾಯಿಸಲಾಗುವುದು’ ಎಂದು ಶಾಸಕ ಜಗದೀಶ ಶೆಟ್ಟರ್‌ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಾಲಿಕೆಗೆ ಸರ್ಕಾರದಿಂದ ₹130 ಕೋಟಿ ಪಿಂಚಣಿ ಬರಬೇಕಿದ್ದು, ಅದರಲ್ಲಿ ₹50 ಕೋಟಿ ಬಿಡುಗಡೆ ಮಾಡಲು ಹಿಂದಿನ ಸರ್ಕಾರ ಈಗಾಗಲೇ ನಿರ್ಧರಿಸಿದೆ. ಬಾಕಿ ಇರುವ ಪಿಂಚಣಿಯಲ್ಲಿ ಹಣ ಬಿಡುಗಡೆಗೆ ಪ್ರಯತ್ನ ಮಾಡಲಾಗುವುದು’ ಎಂದರು.

‘ನಗರದ ಬಹುತೇಕ ಕಡೆ ಸಿಆರ್‌ಎಫ್‌ ರಸ್ತೆ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ ದೊರೆತು, ಹಣ ಸಹ ಬಿಡುಗಡೆಯಾಗಿದೆ. ಆದರೆ, ಹಿಂದಿನ ಮೈತ್ರಿ ಸರ್ಕಾರದ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಅವರು ₹300 ಕೋಟಿ ವೆಚ್ಚದ ರಸ್ತೆ ನಿರ್ಮಾಣಕ್ಕೆ ನೀಡಿದ್ದ ಅನುಮತಿಯನ್ನೇ ತಡೆಹಿಡಿದರು. ಇದರಿಂದಾಗಿ ಅವಳಿ ನಗರದ ಬಹುತೇಕ ರಸ್ತೆಗಳು ಹಗೆಗೆಟ್ಟು ಹೋಗಿವೆ. ತೆಗ್ಗು ಬಿದ್ದ ರಸ್ತೆಗಳ ದುರಸ್ತಿಗೆ ಈಗಾಗಲೇ ಟೆಂಡರ್‌ ಕರೆಯಲಾಗಿದ್ದು, ಮಳೆ ಕಡಿಮೆಯಾದ ಮೇಲೆ ಕಾಮಗಾರಿ ಆರಂಭಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.