ADVERTISEMENT

ಸ್ವಾತಂತ್ರ್ಯೋತ್ಸವ: 12 ತಾಸು ಸಾಂಸ್ಕೃತಿಕ ಕಾರ್ಯಕ್ರಮ ಆ.15ಕ್ಕೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 8:29 IST
Last Updated 14 ಆಗಸ್ಟ್ 2022, 8:29 IST

ಹುಬ್ಬಳ್ಳಿ: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆ.15ರಂದು ಬೆಳಿಗ್ಗೆ 10ರಿಂದ ರಾತ್ರಿ 10ರವರೆಗೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಗುರುರಾಜ ಕುಲಕರ್ಣಿ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯ‌ಲ್ಲಿ ಮಾತನಾಡಿ, ‘ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಆಪ್ತ ಕಾರ್ಯದರ್ಶಿ ಎಂ.ಜಿ. ಮಳಗಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಕರ್ನಲ್‌ ನಾಗರಾಜ ಜೋಗಳೆಕರ, ಕರ್ನಲ್‌ ಭರಮಗೌಡರ ಪಾಟೀಲ, ಮೇಜರ್ ಮಹಾದೇವ ಬೊಂಗಾಳೆ ಮತ್ತು ಕಮಾಂಡರ್‌ ನವಲೂರು ಅವರನ್ನು ಸನ್ಮಾನಿಸಲಾಗುವುದು’ ಎಂದು ಹೇಳಿದರು.

‘ಸಂಜೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಸಕ ಅರವಿಂದ ಬೆಲ್ಲದ ಉದ್ಘಾಟಿಸಲಿದ್ದಾರೆ. ಮಾಜಿ ಕ್ರಿಕೆಟಿಗ ಶಿವಾನಂದ ಗುಂಜಾಳ ಅವರಿಗೆ ವಿವೇಕಾನಂದ ಪ್ರಶಸ್ತಿ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಿವಿಧ ಶಾಲೆಯ ಮಕ್ಕಳು ನೃತ್ಯ, ಗಾಯನ ಹಾಗೂ ನಾಟಕ ಪ್ರದರ್ಶನ ಮಾಡಲಿದ್ದಾರೆ’ ಎಂದು ತಿಳಿಸಿದರು.

ADVERTISEMENT

ನಾಗರಾಜ, ಗೀತಾ ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.