ADVERTISEMENT

ಹುಬ್ಬಳ್ಳಿ | ಬೈಕ್‌ಗಳ ನಡುವೆ ಅಪಘಾತ: ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2024, 11:03 IST
Last Updated 22 ಏಪ್ರಿಲ್ 2024, 11:03 IST
   

ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಕಿಮ್ಸ್ ಆಸ್ಪತ್ರೆ ಎದುರು ಭಾನುವಾರ ತಡರಾತ್ರಿ ಎರಡು ಬೈಕ್‌ಗಳ ನಡುವೆ ಅಪಘಾತ ನಡೆದು, ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಒಬ್ಬ ಗಂಭೀರ ಗಾಯಗೊಂಡಿದ್ದು, ಕಿಮ್ಸ್‌ಗೆ ದಾಖಲಿಸಲಾಗಿದೆ.

ರಾಮನಗರ ನಿವಾಸಿ ಆದಿತ್ಯ(17) ಮತ್ತು ರಾಹುಲ್ ಗಾಣಿಗೇರ(30) ಮೃತಪಟ್ಟವರು. ಕೇಶ್ವಾಪುರದ ನಿವಾಸಿ ಸಂಜಯ ಆರ್. ಗಾಯಗೊಂಡವರು. ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT