ಕಲಘಟಗಿ: ಪಟ್ಟಣದ ಹನ್ನೆರಡೆತ್ತಿನ ಮಠದ ಹತ್ತಿರ ನಿರ್ಮಿಸಿರುವ ಬೃಹತ್ ವೇದಿಕೆಯಲ್ಲಿ ನ.17ರಂದು ಬೆಳಿಗ್ಗೆ 10ಕ್ಕೆ 70ನೇ ಅಖಿಲ ಭಾರತ ಸಹಕಾರ ಸಪ್ತಾಹ-2023 ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ತೋಟಗಾರಿಕಾ ಮಹಾಮಂಡಳ ಹಾಗೂ ಕರ್ನಾಟಕ ಸೆಂಟ್ರಲ್ ಕೋ ಅಪರೇಟಿವ್ ಬ್ಯಾಂಕ್, ಧಾರವಾಡ ಮತ್ತು ವಿವಿಧ ಸಹಕಾರ ಸಂಘ, ಹಾಲು ಒಕ್ಕೂಟಗಳ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಕೆಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥಗೌಡ ಮುರಳ್ಳಿ ಹೇಳಿದರು.
ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಪ್ತಾಹಕ್ಕೆ ಚಾಲನೆ ನೀಡುವರು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸಪ್ತಾಹದ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವ ಎಚ್.ಕೆ. ಪಾಟೀಲ, ಸಚಿವ ಶಿವಾನಂದ ಪಾಟೀಲ, ಶಾಸಕ ಬಸವರಾಜ ಬೊಮ್ಮಾಯಿ ಮತ್ತು ಎಂಎಲ್‌ಸಿ ಜಗದೀಶ ಶೆಟ್ಟರ, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ರುದ್ರಪ್ಪ ಲಮಾಣಿ, ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕ ಜಿ.ಟಿ. ದೇವೇಗೌಡ ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.