ADVERTISEMENT

ಹುಬ್ಬಳ್ಳಿ: ನಡೆಯದ ಬಂದ್‌, ಬೀರದ ಪರಿಣಾಮ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 12:09 IST
Last Updated 13 ಫೆಬ್ರುವರಿ 2020, 12:09 IST
ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಹುಬ್ಬಳ್ಳಿಯಲ್ಲಿ ಗುರುವಾರ ಕೆಲ ಕನ್ನಡ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು
ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಹುಬ್ಬಳ್ಳಿಯಲ್ಲಿ ಗುರುವಾರ ಕೆಲ ಕನ್ನಡ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು   

ಹುಬ್ಬಳ್ಳಿ: ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವಂತೆ ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕೆಲ ಕನ್ನಡ ಸಂಘಟನೆಗಳ ಒಕ್ಕೂಟ ಗುರುವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯಲ್ಲಿ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ.

ಬೆಳಿಗ್ಗೆಯಿಂದಲೂ ಸಹಜ ವಾತಾವರಣವಿತ್ತು. ವಾಹನ ಸಂಚಾರ ಕೂಡ ಎಂದಿನಂದಿತ್ತು. ಮಾರುಕಟ್ಟೆ, ಅಂಗಡಿ ಮುಂಗಟ್ಟುಗಳು ಸಹ ತೆರೆದಿದ್ದವು. ಶಾಲಾ, ಕಾಲೇಜುಗಳು ನಡೆದವು.

ಕರ್ನಾಟಕ ಸಂಗ್ರಾಮ ಸೇನೆ ಹಾಗೂ ಮಾನವ ಹಕ್ಕುಗಳ ಸಂರಕ್ಷಣಾ ಫೋರಂ ಸಂಘಟನೆಗಳು ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕು ಎಂದು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಘೋಷಣೆ ಕೂಗಿ ತಹಶೀಲ್ದಾರ್‌ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು. ತಳ್ಳುವ ಗಾಡಿ ಹಿಡಿದು ವರದಿ ಜಾರಿ ಮಾಡಿ ಕನ್ನಡಿಗರಿಗೆ ನ್ಯಾಯ ಒದಗಿಸಿಕೊಡಬೇಕು. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರಾದ ಈರಪ್ಪ ಎಮ್ಮಿ, ಸಂಜೀವ ಧುಮ್ಮಕನಾಳ, ರವಿ ಕದಮ್‌, ಬಸವರಾಜ ಮಣ್ಣೂರಮಠ, ಕಬೇರ ಪವಾರ, ನಾಗರಾಜ ಬಡಿಗೇರ, ಆನಂದ ದಲಬಂಜನ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.