ADVERTISEMENT

ಉಗ್ರರಿಗೆ ತಕ್ಕ ಪಾಠ: ವಿ.ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 14 ಮೇ 2025, 14:50 IST
Last Updated 14 ಮೇ 2025, 14:50 IST
ವಿ.ಸೋಮಣ್ಣ
ವಿ.ಸೋಮಣ್ಣ   

ಹುಬ್ಬಳ್ಳಿ: ‘ಕಾಶ್ಮೀರದ ಪಹಲ್ಗಾಮ್‌ದಲ್ಲಿ 26 ಜನ ಭಾರತೀಯರನ್ನು ಹತ್ಯೆಗೈದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಪ್ರಧಾನಿ ನರೇಂದ್ರ ಮೋದಿ ‘ಸಿಂಧೂರ’ ಕಾರ್ಯಾಚರಣೆ ಕೈಗೊಂಡು, ಉಗ್ರರಿಗೆ ತಕ್ಕ ಪಾಠ ಕಲಿಸಿದ್ದಾರೆ’ ಎಂದು ಸಚಿವ ವಿ.ಸೋಮಣ್ಣ ಹೇಳಿದರು. 

‘ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಗುರುವಾರ ರಾಜ್ಯದಾದ್ಯಂತ ಬಿಜೆಪಿಯಿಂದ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ.  ಪಕ್ಷಾತೀತವಾಗಿ ಎಲ್ಲ ಮುಖಂಡರು ಇದರಲ್ಲಿ ಭಾಗವಹಿಸಲಿದ್ದಾರೆ’ ಎಂದರು. 

‘ದೇಶದ ಅಖಂಡತೆ, ಸಾರ್ವಭೌಮತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಸಾರ್ವಜನಿಕರನ್ನು ಉದ್ದೇಶಿಸಿ ಹೇಳಿದ್ದಾರೆ. ಕಾಂಗ್ರೆಸ್ಸಿಗರ ಬಳಿ ಹೇಳಲು ಏನೂ ಇಲ್ಲ. ದೇಶ ಸುಭಿಕ್ಷೆಯಾಗಿರಬೇಕು. ಅಭಿವೃದ್ಧಿಗೆ ಹೊಡೆತ ಬೀಳಬಾರದೆಂದು ಕದನ ವಿರಾಮ ಘೋಷಿಸಿದ್ದಾರೆ. ಹೊರತು, ಇದರಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ ಮಧ್ಯಸ್ಥಿಕೆ ಇಲ್ಲ’ ಎಂದು ಹೇಳಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.