ADVERTISEMENT

ಭ್ರಷ್ಟರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 2:09 IST
Last Updated 2 ಆಗಸ್ಟ್ 2022, 2:09 IST
ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಸೋಮವಾರ ಹುಬ್ಬಳ್ಳಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು
ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಸೋಮವಾರ ಹುಬ್ಬಳ್ಳಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು   

ಹುಬ್ಬಳ್ಳಿ: ‘ಮಹಾನಗರ ಪಾಲಿಕೆಯ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ ಎಂದು ಪಾಲಿಕೆ ಸದಸ್ಯರೇ ಆರೋಪಿಸುತ್ತಿದ್ದು, ಭ್ರಷ್ಟ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶಿಸ್ತುಕ್ರಮ ಕೈಗೊಳ್ಳಬೇಕು’ ಎಂದು ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಆಗ್ರಹಿಸಿದರು.

ನಗರದಲ್ಲಿರುವ ಪಾಲಿಕೆಯ ಕೇಂದ್ರ ಕಚೇರಿ ಮತ್ತು ಮಿನಿ ವಿಧಾನಸೌಧದ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಅಭಿವೃದ್ಧಿ ಕಾರ್ಯದಲ್ಲಿ ತೊಡಗಬೇಕಾಗಿದ್ದ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಆಡಳಿತಾರೂಢ ಬಿಜೆಪಿ ಸದಸ್ಯರೇ ಆರೋಪಿಸಿದ್ದಾರೆ. ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ಅವಶ್ಯಕತೆ ಪಾಲಿಕೆಗಿದ್ದು, ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪಕ್ಷದ ಮುಖಂಡ ವಿಕಾಸ ಸೊಪ್ಪಿನ ಮಾತನಾಡಿ, ‘ಪಾಲಿಕೆ ಅಧಿಕಾರಿಗಳು ಸಾರ್ವಜನಿಕರ ಮೇಲೆ ದಬ್ಬಾಳಿಕೆ ನಡೆಸಿ, ಪ್ರತಿಯೊಂದು ಕೆಲಸಕ್ಕೆ ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ಸಾಮಾನ್ಯ ಸಭೆಯಲ್ಲಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭ್ರಷ್ಟ ಅಧಿಕಾರಿಗಳ ಮುಖವನ್ನು ಮೇಯರ್‌ ಬಯಲು ಮಾಡಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಪಕ್ಷದ ಮುಖಂಡರಾದ ಅನಂತ ಬುಗಡಿ, ಪ್ರತಿಭಾ ದಿವಾಕರ, ಸುನಂದಾ ಕರಡಿಗುಡ್ಡ, ಭೀಮಪ್ಪ ಪೂಜಾರ, ಮೆಹಬೂಬ್‌ ಹರವಿ, ಹಸನ್‌ ಇಮಾಂದಾರ, ಮಲಪ್ಪ ತಡಸದ, ಮಲ್ಲಿಕಾರ್ಜುನ ಹಿರೇಮಠ, ಕುಮಾರ ನೂಲ್ವಿ, ಲಕ್ಷ್ಮಣ ನರಸಾಪುರ, ಕಿಶೋರ ಶೆಟ್ಟಿ, ಅಲ್ಲಗೊಂಡ ಬಿರಾದಾರ, ಸಂತೋಷ ಮಾನೆ, ರೇವಣಸಿದ್ಧ ಹುಬ್ಬಳ್ಳಿ, ಬಸವರಾಜ ತೇರದಾಳ ಹಾಗೂ ದಾನಿಲ ಏಕೋಸ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.