ಧಾರವಾಡ: ರಾಜ್ಯ ಸರ್ಕಾರವು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಕಡಿತಗೊಳಿಸಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ಜಿಲ್ಲಾ ಘಟಕದವರು ಶನಿವಾರ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕೃಷಿ ಪದವಿ ವಿದ್ಯಾರ್ಥಿಗಳಿಗೆ ₹15 ಸಾವಿರ ವಿದ್ಯಾರ್ಥಿ ವೇತನ ನೀಡಬೇಕು. ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ₹4 ಸಾವಿರ ವಿದ್ಯಾರ್ಥಿವೇತನ ಮಾತ್ರ ನೀಡಲಾಗುತ್ತಿದೆ ಎಂದು ಮನವಿ ಪತ್ರದಲ್ಲಿ ದೂರಿದ್ದಾರೆ.
ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ನೀಡುತ್ತಿದ್ದಷ್ಟು ವಿದ್ಯಾರ್ಥಿ ವೇತನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.