ಹುಬ್ಬಳ್ಳಿ: ಒಡಿಶಾದ ಭುವನೇಶ್ವರದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ವಿದ್ಯಾನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜು ಎದುರು ಸೇರಿದ ಪರಿಷತ್ ಕಾರ್ಯಕರ್ತರು, ವಿದ್ಯಾರ್ಥಿಗಳು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಒಡಿಶಾದ ಎನ್‌ಎಸ್‌ಯುಐ ಅಧ್ಯಕ್ಷ ಉದಿತ್ ಪ್ರಧಾನ್, ಹೋಟೆಲ್ ಕೊಠಡಿಗೆ ಕರೆದೊಯ್ದು ತಂಪು ಪಾನೀಯದಲ್ಲಿ ನಿದ್ರೆ ಮಾತ್ರೆ ಬೆರೆಸಿ ನಂತರ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ವಿಷಯ ಬಹಿರಂಗಪಡಿಸದಂತೆ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆ ಖಂಡನೀಯ ಎಂದು ಪ್ರತಿಭಟನಕಾರರು ಹೇಳಿದರು.
ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.