ಹುಬ್ಬಳ್ಳಿ: ‘ಕನ್ನಡದ ಬಗ್ಗೆ ತಮಿಳು ನಟ ಕಮಲ್ ಹಾಸನ್ ಹೇಳಿಕೆ ಖಂಡನೀಯ. ಕೂಡಲೇ ಅವರು ಕ್ಷಮೆಯಾಚಿಸಬೇಕು’ ಎಂದು ನಟಿ ರಚಿತಾ ರಾಮ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿನಿಮಾ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿರುವ ಅವರು, ಕನ್ನಡದ ಬಗ್ಗೆ ಈ ರೀತಿ ಮಾತನಾಡಿರುವುದು ಸಮಂಜಸವಲ್ಲ’ ಎಂದರು.
‘ಕ್ಷಮೆ ಕೇಳದಿದ್ದರೆ ಅವರ ನಟನೆಯ ‘ಥಗ್ ಲೈಫ್’ ಸಿನಿಮಾವನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕೆ? ಬೇಡವೇ? ಎಂಬ ಬಗ್ಗೆ ಚಿತ್ರರಂಗದ ಹಿರಿಯರು ನಿರ್ಧರಿಸುತ್ತಾರೆ. ಈ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ’ ಎಂದು ರಚಿತಾ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.