ADVERTISEMENT

ಪಾಲಿಕೆ ಸ್ವಚ್ಛತಾ ರಾಯಭಾರಿ ಪುನೀತ್‌ ರಾಜ್‌ಕುಮಾರ್‌ಗೆ ಸನ್ಮಾನ

ಇಂದು ನಡೆಯುವ ‘ನಟಸಾರ್ವಭೌಮ’ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 4 ಜನವರಿ 2019, 14:32 IST
Last Updated 4 ಜನವರಿ 2019, 14:32 IST
ಪುನೀತ್ ರಾಜ್‌ಕುಮಾರ್
ಪುನೀತ್ ರಾಜ್‌ಕುಮಾರ್   

ಹುಬ್ಬಳ್ಳಿ: ಇಲ್ಲಿನ ನೆಹರೂ ಮೈದಾನದಲ್ಲಿ ಇಂದು (ಜ.05) ಸಂಜೆ ನಡೆಯಲಿರುವ ‘ನಟಸಾರ್ವಭೌಮ’ ಚಿತ್ರದ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲಿಕೆಯ ಸ್ವಚ್ಛತಾ ರಾಯಭಾರಿಯೂ ಆಗಿರುವ ಚಿತ್ರದ ನಾಯಕ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಪೌರ ಸನ್ಮಾನ ಮಾಡಲಾಗುವುದು ಎಂದು ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಾನಂದ ಮುತ್ತಣ್ಣವರ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ– ಧಾರವಾಡದ ಮಹಾಜನತೆಗೆ ಅವರು ಸ್ವಚ್ಛತೆಯ ಸಂದೇಶ ನೀಡಲಿದ್ದಾರೆ. ಮೇಯರ್ ಸುಧೀರ್ ಸರಾಫ್ ಸೇರಿದಂತೆ ಸಂಸದರು, ಶಾಸಕರು ಉಪಸ್ಥಿತರಿರುವರು. ಜನರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಪಾಲಿಕೆ ಹಲವಾರು ಕ್ರಮ ಕೈಗೊಂಡಿದೆ. ಕರಪತ್ರಗಳನ್ನು ಈಗಾಗಲೇ ಮುದ್ರಿಸಲಾಗಿದ್ದು, ಅವುಗಳನ್ನು ಹಂಚಲಾಗುವುದು ಎಂದರು.

ಪುನೀತ್ ರಾಜ್‌ಕುಮಾರ್ ಅವರ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆದಿರುವುದರಿಂದ ಕಾರ್ಯಕ್ರಮ ನಡೆಯುವುದೋ ಇಲ್ಲವೋ ಎಂಬ ಅನುಮಾನವನ್ನು ಕೆಲಸವರು ವ್ಯಕ್ತಪಡಿಸಿದ್ದಾರೆ. ಪೂರ್ವನಿಗದಿಯಂತೆಯೇ ಕಾರ್ಯಕ್ರಮ ನಡೆಯಲಿದೆ ಎಂದು ಚಿತ್ರದ ನಿರ್ದೇಶಕ ಪವನ್ ಒಡೆಯರ್ ಖುದ್ದು ತಿಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ADVERTISEMENT

ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡವು ಜೀ ವಾಹಿನಿ ಸಹಯೋಗದೊಂದಿಗೆ ಆಯೋಜಿಸಿದೆ. ಪಾಲಿಕೆ ಸನ್ಮಾನ ಕಾರ್ಯಕ್ರಮಕ್ಕೆ ನಾಲ್ಕೈದು ಲಕ್ಷ ಮಾತ್ರ ಖರ್ಚು ಮಾಡುತ್ತಿದೆ. ನಾವೇ ಅಂತಹ ಕಾರ್ಯಕ್ರಮ ಆಯೋಜಿಸಬೇಕು ಎಂದರೆ ಸುಮಾರು ₹40 ಲಕ್ಷ ಖರ್ಚಾಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.