ADVERTISEMENT

'ಅಗ್ನಿಪಥ' ವಿರೋಧಿಸಿ ಧಾರವಾಡದಲ್ಲಿ ದಿಢೀರ್ ಪ್ರತಿಭಟನೆ: ಲಘು ಲಾಠಿ ಪ್ರಹಾರ

​ಪ್ರಜಾವಾಣಿ ವಾರ್ತೆ
Published 18 ಜೂನ್ 2022, 7:13 IST
Last Updated 18 ಜೂನ್ 2022, 7:13 IST
'ಅಗ್ನಿಪಥ' ವಿರೋಧಿಸಿ ಧಾರವಾಡದಲ್ಲಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
'ಅಗ್ನಿಪಥ' ವಿರೋಧಿಸಿ ಧಾರವಾಡದಲ್ಲಿ ಪ್ರತಿಭಟನೆ: ಲಘು ಲಾಠಿ ಪ್ರಹಾರ   

ಧಾರವಾಡ: ಸೇನಾ ಅಲ್ಪಾವಧಿ ನೇಮಕಾತಿ ಯೋಜನೆ 'ಅಗ್ನಿಪಥ' ಖಂಡಿಸಿ ದಿಢೀರನೆ ಪ್ರತಿಭಟನೆ ನಡೆಸಿದ ಅಭ್ಯರ್ಥಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಚದುರಿಸಿದರು.

ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಸೇರಿದ ಅಭ್ಯರ್ಥಿಗಳು ವಾಟ್ಸ್ಆ್ಯಪ್ ಗುಂಪುಗಳ ಮೂಲಕ ಸಂಘಟಿತರಾಗಿದ್ದರು.ನಗರದ ಜಿಲ್ಲಾ ನ್ಯಾಯಾಲಯ ವೃತ್ತದ ಬಳಿ ಏಕಾಏಕಿ ಪ್ರತಿಭಟನೆಗೆ ಮುಂದಾದರು.
ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಮನವಿ ಸ್ವೀಕರಿಸಿದರು.

ಇದಕ್ಕೆ ಒಪ್ಪದ ಅಭ್ಯರ್ಥಿಗಳು ಜಿಲ್ಲಾಧಿಕಾರಿ ಕಚೇರಿಗೆ ತೆರಳುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಕೆಲವು ಅಭ್ಯರ್ಥಿಗಳನ್ನು ವಶಕ್ಕೆ ಪಡೆದರು. ಉಳಿದವರನ್ನು ಚದುರಿಸಿದರು.

ADVERTISEMENT

ಇದರಿಂದಾಗಿ ಸ್ಥಳದಲ್ಲಿ ಭಿಗುವಿನ ವಾತಾವರಣ ನಿರ್ಮಾಣಗೊಂಡಿತು. ಪೊಲೀಸ್ ಆಯುಕ್ತ ಲಭೂರಾಮ್, ಡಿಸಿಪಿ, ಇನ್ ಸ್ಪೆಕ್ಟರ್ ಗಳು, ಸಿಸಿಬಿ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದರು.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.