
ಹುಬ್ಬಳ್ಳಿ: ‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಾರದು ಎಂದು ಆಗ್ರಹಿಸಿ ಜ.21ರಂದು ನಗರದಲ್ಲಿ ಅಹಿಂದ ಸಮಾವೇಶ ಏರ್ಪಡಿಸಲಾಗಿದೆ’ ಎಂದು ಅಹಿಂದ ಸಂಘಟನೆಯ ಗೌರವ ಕಾರ್ಯದರ್ಶಿ ಸಿದ್ದು ತೇಜಿ ಹೇಳಿದರು.
‘ದಾವಣಗೆರೆ, ಮೈಸೂರು, ಚಿತ್ರದುರ್ಗದಲ್ಲೂ ಸಮಾವೇಶ ನಡೆಸಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಸಂದೇಶ ರವಾನಿಸಲಾಗುವುದು’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ರಾಜ್ಯದ ವಿವಿಧೆಡೆ ಈಗಾಗಲೇ ಸಭೆ ನಡೆಸಲಾಗಿದೆ. ಸಿದ್ದರಾಮಯ್ಯ ಅವರನ್ನು ಮುಂದುವರಿಸುವ ಕುರಿತು ಕಾಂಗ್ರೆಸ್ ಪಕ್ಷದ ವರಿಷ್ಠರು ಸ್ಪಷ್ಟಪಡಿಸಿಲ್ಲ. ಹೀಗಾಗಿ, ಸಮಾವೇಶ ಅನಿವಾರ್ಯವಾಗಿದೆ’ ಎಂದರು.
‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಅನಿವಾರ್ಯವಾದರೆ, ಅಹಿಂದ ನಾಯಕರೊಬ್ಬರಿಗೆ ಅವಕಾಶ ಸಿಗಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.