
ಹುಬ್ಬಳ್ಳಿ: ‘ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಇರುವರು ಎಂಬ ಕಾರಣಕ್ಕೆ ಅಹಿಂದ ಸಮುದಾಯಗಳು ಕಾಂಗ್ರೆಸ್ ಬೆಂಬಲಿಸಿವೆ. ಅವರನ್ನು ಹುದ್ದೆಯಿಂದ ಕೆಳಗಿಳಿಸಲು ತೀರ್ಮಾನಿಸಿದರೆ, ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ’ ಎಂದು ಅಹಿಂದ ಕರ್ನಾಟಕ ಸಂಘಟನೆಯ ಸಂಚಾಲಕ ಸಿದ್ದಣ್ಣ ತೇಜಿ ಹೇಳಿದರು.
‘ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಅವರ ಮುಖ ನೋಡಿ ಕಾಂಗ್ರೆಸ್‌ಗೆ ಮತ ಹಾಕಿಲ್ಲ. ಸಿದ್ದರಾಮಯ್ಯ ಅವರ ಮೇಲೆ ಯಾವುದೇ ಹಗರಣಗಳ ಅರೋಪವಿಲ್ಲ. ಅವರು ಸ್ವಜನಪಕ್ಷಪಾತ ಮಾಡುತ್ತಿಲ್ಲ. ಹೀಗಾಗಿ ಅವರ ಮೇಲೆ ನಂಬಿಕೆಯಿಟ್ಟು ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
‘ಡಿ.ಕೆ.ಶಿವಕುಮಾರ್ ಅವರನ್ನು ಬೆಂಬಲಿಸುವ ಮಠಾಧೀಶರು ಉದ್ದೇಶಪೂರ್ವಕವಾಗಿ ಅಹಿಂದ ಮತ್ತು ಕುರುಬ ಸಮಾಜವನ್ನು ಅವಮಾನಿಸುತ್ತಿದ್ದಾರೆ. ಆದರೂ ಸಿದ್ದರಾಮಯ್ಯ ಅವರಿಗೆ ಕೆಟ್ಟ ಹೆಸರು ಬಾರದಿರಲಿಯೆಂದು ನಮ್ಮ ಸಮುದಾಯ ಸುಮ್ಮನಿದೆ’ ಎಂದರು.
ಅಹಿಂದ ಕರ್ನಾಟಕ ರಾಜ್ಯ ಘಟಕದ ಅದ್ಯಕ್ಷ ಪ್ರಭುಲಿಂಗ ದೊಡ್ಡಿನಿ ಮಾತನಾಡಿ, ‘2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರಬೇಕು. ಅವರನ್ನು ಕೆಳಗಿಳಿಸಿದರೆ, ಕರ್ನಾಟಕವು ಕಾಂಗ್ರೆಸ್ ಮುಕ್ತವಾಗಲಿದೆ. ಅಲ್ಲದೆ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.